ಎಸ್ ಉಮಾಶಂಕರ್ 
ರಾಜ್ಯ

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಎಸ್ ಉಮಾಶಂಕರ್ ಅಧಿಕಾರ ಸ್ವೀಕಾರ: ಮಳೆ ಸಂಬಂಧಿತ ಸಮಸ್ಯೆಗಳಿಗೆ ಆದ್ಯತೆ

'ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಅರಣ್ಯ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಂತಹ ಎಲ್ಲ ಇಲಾಖೆಗಳು ಮಳೆಗಾಲದಲ್ಲಿ ಮಳೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಾಗ ಉತ್ತಮವಾಗಿ ಸಮನ್ವಯ ಸಾಧಿಸಲು ಸೂಚಿಸಲಾಗಿದೆ' ಎಂದು ಉಮಾಶಂಕರ್ ಹೇಳಿದರು.

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಸ್ ಉಮಾಶಂಕರ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಡಳಿತಾಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಕೂಡಲೇ ಅವರು ಮುಂಗಾರು ಮಳೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಎಲ್ಲ ಅಧಿಕಾರಿಗಳು ಮತ್ತು ನಾಗರಿಕ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶಂಕರ್, ಮಳೆಗೆ ಸಂಬಂಧಿಸಿದ ಸಮಸ್ಯೆಗಳು, ಧರೆಗುರುಳುವ ಮರಗಳು, ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಎಲ್ಲ ಎಂಟು ವಲಯಗಳ ಆಯುಕ್ತರಿಗೆ ತಿಳಿಸಲಾಗಿದೆ ಎಂದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ನೀರಿನ ಮಾಲಿನ್ಯಕ್ಕೆ ಸಂಬಂಧಿಸಿದ ದೂರುಗಳನ್ನು ತಕ್ಷಣವೇ ಪರಿಹರಿಸಲು ಅವರು ಸೂಚಿಸಿದರು.

'ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಅರಣ್ಯ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಂತಹ ಎಲ್ಲ ಇಲಾಖೆಗಳು ಮಳೆಗಾಲದಲ್ಲಿ ಮಳೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಾಗ ಉತ್ತಮವಾಗಿ ಸಮನ್ವಯ ಸಾಧಿಸಲು ಸೂಚಿಸಲಾಗಿದೆ' ಎಂದು ಉಮಾಶಂಕರ್ ಹೇಳಿದರು.

ವಲಯಗಳ ಆಯುಕ್ತರು ತಂಡಗಳ ಮುಖ್ಯಸ್ಥರಾಗಿರುತ್ತಾರೆ. ಮಳೆನೀರು ಚರಂಡಿಗಳನ್ನು ಸರಿಪಡಿಸಲು ಮತ್ತು ನೀರು ಮುಕ್ತವಾಗಿ ಹರಿಯಲು ಎದುರಾಗಿರುವ ಅಡಚಣೆಗಳನ್ನು ತೆರವುಗೊಳಿಸಲು ವಲಯ ಮುಖ್ಯಸ್ಥರಿಗೆ ತಿಳಿಸಲಾಗಿದೆ. ರಸ್ತೆ ಬದಿಯ ಅವಶೇಷಗಳನ್ನು ಸಹ ತೆರವುಗೊಳಿಸಲು ವಲಯ ಮುಖ್ಯಸ್ಥರು ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!