ನಾಗರಾಜ್, ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಆಪ್ತ ನಾಗರಾಜ್ ಸೇರಿದಂತೆ ಇನ್ನೂ ಮೂವರ ಬಂಧನ

ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರ ಆಪ್ತ ನಾಗರಾಜ್ ಸೇರಿದಂತೆ ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರ ಆಪ್ತ ನಾಗರಾಜ್ ಸೇರಿದಂತೆ ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿ ದರ್ಶನ್ ಅವರ ಫಾರ್ಮ್ ಹೌಸ್ ಸೇರಿದಂತೆ ಅವರ ಎಲ್ಲಾ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ನಾಗರಾಜ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದರ್ಶನ್, ಆತನ ಸ್ನೇಹಿತೆ ಹಾಗೂ ನಟಿ ಪವಿತ್ರಾ ಗೌಡ ಮತ್ತಿತರ 11 ಮಂದಿಯನ್ನು ಪೊಲೀಸರು ಬಂಧಿಸಿದಾಗಿನಿಂದ ನಾಗರಾಜ್ ಪರಾರಿಯಾಗಿದ್ದ. ಮತ್ತೋರ್ವ ಪ್ರದೋಶ್ ಎನ್ನಲಾಗಿದೆ. ಕೊಲೆಯಲ್ಲಿ ಈತ ಪಾತ್ರದ ಬಗ್ಗೆ ವಿವರಗಳನ್ನು ಮೂಲಗಳು ಬಹಿರಂಗಪಡಿಸಿಲ್ಲ. ದರ್ಶನ್ ನಾಯಕ ನಟರಾಗಿದ್ದ ಕೆಲವು ಸಿನಿಮಾಗಳಲ್ಲಿ ಪ್ರದೋಶ್ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ರವಿ ಎಂದು ಗುರುತಿಸಲಾದ ಮತ್ತೋರ್ವ ಗುರುವಾರ ಸಂಜೆ ಡಿವೈಎಸ್ ಪಿ ಮುಂದೆ ಶರಣಾಗಿದ್ದಾನೆ. ಈತ ಚಿತ್ರದುರ್ಗ ಜಿಲ್ಲಾ ಕೇಂದ್ರದ ಕುರುಬರಹಟ್ಟಿ ನಿವಾಸಿಯಾಗಿದ್ದು, ಕೊಲೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಸೇರಿದಂತೆ 16 ಮಂದಿಯನ್ನು ಬಂಧಿಸಲಾಗಿದೆ. ಜೂನ್ 8 ರಂದು ರಾತ್ರಿ ಪವಿತ್ರಾಗೆ ಅಶ್ಲೀಲ ಸಂದೇಶ ರವಾನಿಸಿದ ಆರೋಪದ ಮೇಲೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ದರ್ಶನ್ ಮತ್ತು ಆತನ ತಂಡವನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel