ಕರ್ನಾಟಕ ಹೈಕೋರ್ಟ್ 
ರಾಜ್ಯ

ಪರೀಕ್ಷೆ ನೆಪದಲ್ಲಿ ಮಹಿಳೆಗೆ ಕಿರುಕುಳ: ವೈದ್ಯರಿಂದ ರೋಗಿಯ ನಂಬಿಕೆ ಉಲ್ಲಂಘನೆ ಸ್ವೀಕಾರಾರ್ಹವಲ್ಲ- High Court

ರೋಗಿಗಳು ದುರ್ಬಲ ಸ್ಥಿತಿಯಲ್ಲಿದ್ದಾಗ ತಮ್ಮ ಸಹಾಯದ ನಿರೀಕ್ಷೆಯಲ್ಲಿ ಅವರು ಬಂದಿರುತ್ತಾರೆ ಎಂಬುದನ್ನು ವೈದ್ಯರು ನೆನಪಿಟ್ಟುಕೊಳ್ಳಬೇಕು ಮತ್ತು ಅಂತಹ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರು: ವೈದ್ಯರು ರೋಗಿಯೊಬ್ಬರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡರೆ ವೈದ್ಯರು ಮತ್ತು ರೋಗಿಯ ನಡುವಿನ ನಂಬಿಕೆಯ ಸಂಬಂಧವು ಹದಗೆಡುತ್ತದೆ ಎಂಬ ಅಂಶವನ್ನು ಗಮನಿಸಿರುವ ಕರ್ನಾಟಕ ಹೈಕೋರ್ಟ್, ವೈದ್ಯರ ವಿರುದ್ಧ ಮಹಿಳಾ-ರೋಗಿಯೊಬ್ಬರು ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ನಿರಾಕರಿಸಿತು.

ದೂರುದಾರ ಮಹಿಳೆಯ ಶರ್ಟ್ ಮತ್ತು ಬ್ರಾ ತೆಗೆದು ರೋಗಿಯ ಎಡ ಸ್ತನದ ಮೇಲೆ ಬಾಯಿ ಇಟ್ಟ ವೈದ್ಯರ ಕ್ರಮವು ಐಪಿಸಿಯ ಸೆಕ್ಷನ್ 354A(1) (i) ಗೆ ಒಳಪಡುತ್ತದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚೇತನ್ ಕುಮಾರ್ ಎಸ್ (33) ಎಂಬುವರು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ದೂರುದಾರ ಮಹಿಳೆ (28) ಎದೆನೋವಿನಿಂದ ಬಳಲುತ್ತಿದ್ದರು, ಆರೋಪಿಯು ಕರ್ತವ್ಯ ವೈದ್ಯರಾಗಿದ್ದ ಜೆ.ಪಿ.ನಗರದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಕೆಗೆ ಚಿಕಿತ್ಸೆ ನೀಡಿದ ನಂತರ ಇಸಿಜಿ ಮತ್ತು ಎದೆಯ ಎಕ್ಸ್-ರೇ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿದರು. ವರದಿಗಳನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳುವಂತೆ ತಿಳಿಸಿದರು. ಆಕೆ ಕಳುಹಿಸಿದ ವರದಿಗಳನ್ನು ನೋಡಿದ ಆರೋಪಿಯು ಮಾರ್ಚ್ 21, 2024 ರಂದು ಮಧ್ಯಾಹ್ನ 2 ಗಂಟೆಗೆ ಜರಗನಹಳ್ಳಿಯಲ್ಲಿರುವ ತನ್ನ ಕ್ಲಿನಿಕ್‌ಗೆ ಭೇಟಿ ನೀಡುವಂತೆ ಹೇಳಿದ್ದಾನೆ.

ಆಕೆ ಕ್ಲಿನಿಕ್‌ಗೆ ಭೇಟಿ ನೀಡಿದಾಗ ಆತ ಒಬ್ಬನೇ ಇದ್ದ. ಅವನು ಅವಳನ್ನು ಕೋಣೆಗೆ ಕರೆದೊಯ್ದು ಮಲಗಲು ಹೇಳಿದ. ಆಕೆಯ ಎದೆಯ ಮೇಲೆ ಸ್ಟೆತಸ್ಕೋಪ್ ಇರಿಸುವ ಮೂಲಕ ಅವಳ ಹೃದಯ ಬಡಿತವನ್ನು ಪರೀಕ್ಷಿಸಲು ಪ್ರಾರಂಭಿಸಿದನು. ನಂತರ ಮಹಿಳೆಯ ಶರ್ಟ್ ಮತ್ತು ಬ್ರಾ ತೆಗೆಯಲು ಹೇಳಿದ್ದಾನೆ. ಐದು ನಿಮಿಷಗಳ ಪರೀಕ್ಷೆಯ ನಂತರ, ಅವನು ತನ್ನ ಕೈಗಳಿಂದ ಸ್ತನವನ್ನು ಸ್ಪರ್ಶಿಸಲು ಪ್ರಾರಂಭಿಸಿದನು, ಎಡ ಸ್ತನಕ್ಕೆ ಮುತ್ತಿಟ್ಟನು. ಇದರಿಂದ ಗಾಬರಿಗೊಂಡ ಆಕೆ ಕ್ಲಿನಿಕ್‌ನಿಂದ ಓಡಿಬಂದು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾಳೆ. ಮರುದಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ದಾಖಲಿಸಿದ್ದರು.

ವೈದ್ಯರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಮತ್ತು ಎದೆಯ ಮೇಲೆ ಸ್ಟೆತಸ್ಕೋಪ್ ಮಾತ್ರ ಇರಿಸಿದ್ದಾರೆ, ಆದ್ದರಿಂದ ಅವರ ವಿರುದ್ಧದ ಆರೋಪಗಳು ಸುಳ್ಳು ಎಂದು ಆರೋಪಿಸಿ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ರೋಗಿಯ ದೇಹವನ್ನು ಪರೀಕ್ಷಿಸಿಲು ವೈದ್ಯರಿಗೆ ಅವಕಾಶವಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ ಪರೀಕ್ಷೆಯನ್ನು ಗುಣಪಡಿಸಲು ಬಳಸಿದರೆ, ಅದು ಸಂಪೂರ್ಣವಾಗಿ ವಿಭಿನ್ನ ಸನ್ನಿವೇಶ ಮತ್ತು ದೈವಿಕ ಕ್ರಿಯೆಯಾಗಿದೆ.

ಅದನ್ನು ಬೇರೆ ಯಾವುದಾದರೂ ಭಾವನೆಗೆ ಬಳಸಿದರೆ, ಅದು IPC ಯ ಸೆಕ್ಷನ್ 354 A ಗೆ ಒಳಗಾಗುತ್ತದೆ. ರೋಗಿಗಳು ದುರ್ಬಲ ಸ್ಥಿತಿಯಲ್ಲಿದ್ದಾಗ ತಮ್ಮ ಸಹಾಯದ ನಿರೀಕ್ಷೆಯಲ್ಲಿ ಅವರು ಬಂದಿರುತ್ತಾರೆ ಎಂಬುದನ್ನು ವೈದ್ಯರು ನೆನಪಿಟ್ಟುಕೊಳ್ಳಬೇಕು ಮತ್ತು ಅಂತಹ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ವೈದ್ಯಕೀಯ ಮಂಡಳಿಯು ಸೂಚಿಸಿರುವ ಲೈಂಗಿಕ ಮಿತಿಗಳ ಕುರಿತು ವೈದ್ಯರ ಮಾರ್ಗಸೂಚಿಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಮಹಿಳಾ ರೋಗಿಯನ್ನು ಪುರುಷ ವೈದ್ಯರು ಪರೀಕ್ಷಿಸುವಾಗ, ನಿರ್ದಿಷ್ಟವಾಗಿ ದೈಹಿಕ ಪರೀಕ್ಷೆಯ ಸಮಯದಲ್ಲಿ ಇನ್ನೊಬ್ಬ ಮಹಿಳೆಯ ಉಪಸ್ಥಿತಿಯು ಅವಶ್ಯಕವಾಗಿದೆ ಎಂದು ಹೇಳಿದೆ. ಆದರೆ ವೈದ್ಯರು ಪ್ರಾಥಮಿಕವಾಗಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಆದ್ದರಿಂದ ಅವರ ಅರ್ಜಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT