ನಟಿ ರಮ್ಯಾ 
ರಾಜ್ಯ

'ಯಾರೂ ಜನರನ್ನು ಕೊಲ್ಲಲು ಹೋಗುವುದಿಲ್ಲ': ನಟ ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ; ಪೊಲೀಸರ ಕೆಲಸಕ್ಕೆ ಮೆಚ್ಚುಗೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರನ್ನು ಬಂಧಿಸಿರುವುದು ಕನ್ನಡ ಚಿತ್ರರಂಗದ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಚರಂಡಿಯಲ್ಲಿ 33 ವರ್ಷದ ರೇಣುಕಾ ಸ್ವಾಮಿ ಎಂಬುವವರ ಶವ ಪತ್ತೆಯಾದ ಬಳಿಕ ದರ್ಶನ್ ಸೇರಿದಂತೆ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿರುವ ರಮ್ಯಾ, 'ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು' ಎಂದಿದ್ದಾರೆ.

ಅದೇ ಪೋಸ್ಟ್‌ನಲ್ಲಿ, ಅವರು ಕರ್ನಾಟಕ ಪೊಲೀಸ್ ಅಧಿಕಾರಿಗಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. 'ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ' ಎಂದಿದ್ದಾರೆ.

#JusticeforRenukaswamy #Darshan #Yedyurappa #PrajwalRevanna' ಎಂದು ನಟಿ ಪೋಸ್ಟ್ ಅನ್ನು ಕೊನೆಗೊಳಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿರುವ ಬಗ್ಗೆ ನಟಿ ಎಕ್ಸ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!