ರೇಣುಕಾಸ್ವಾಮಿ - ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಮತ್ತು ಗ್ಯಾಂಗ್ ಮತ್ತೆ ಐದು ದಿನ ಪೊಲೀಸ್ ವಶಕ್ಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಶನಿವಾರ ಮತ್ತೆ ಐದು ದಿನ ಪೊಲೀಸರ ವಶಕ್ಕೆ ನೀಡಿದೆ.

ಬೆಂಗಳೂರು: ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಶನಿವಾರ ಮತ್ತೆ ಐದು ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ದರ್ಶನ್ ಹಾಗೂ ಇತರೆ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಭಾನುವಾರಕ್ಕೆ ಕೊನೆಗೊಳ್ಳಲಿದೆ. ಆದರೆ ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯಕ್ಕೆ ರಜೆ ಇರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸರು ಇಂದೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ 9 ದಿನ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಪೊಲೀಸ್ ಕಸ್ಟಡಿಯ ಅವಧಿಯನ್ನು ಐದು ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳನ್ನು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು 19 ಆರೋಪಿಗಳಿದ್ದು, ಇತರೆ ಕೆಲವು ಆರೋಪಿಗಳನ್ನು ನಂತರದ ದಿನಗಳಲ್ಲಿ ಬಂಧಿಸಲಾಗಿದ್ದು, ಕೆಲವು ಆರೋಪಿಗಳು ತಾವೇ ಪೊಲೀಸರ ಮುಂದೆ ಶರಣಾಗಿದ್ದರು.

ಬಂಧಿತ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರಿಂದ ಮತ್ತು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದಲೇ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್