ಬಿವೈ ವಿಜಯೇಂದ್ರ 
ರಾಜ್ಯ

ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಸೂಚನೆ: ನ್ಯಾಯ ದೇಗುಲದಲ್ಲಿ ಸತ್ಯಕ್ಕೆ ಜಯ ಸಿಗಲಿದೆ; ಬಿವೈ ವಿಜಯೇಂದ್ರ

ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸದಂತೆ ಸಿಐಡಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ‘ನ್ಯಾಯ ಮಂದಿರ’ದಲ್ಲಿ ಸತ್ಯಕ್ಕೆ ಜಯ ಸಿಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸದಂತೆ ಸಿಐಡಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ‘ನ್ಯಾಯ ಮಂದಿರ’ದಲ್ಲಿ ಸತ್ಯಕ್ಕೆ ಜಯ ಸಿಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸಿಐಡಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂನ್ 17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸೂಚಿಸಿದೆ.

ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, 'ಬಿಎಸ್ ಯಡಿಯೂರಪ್ಪ ಅವರ ಮೇಲಿನ ಕರ್ನಾಟಕದ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣವು ಬಿಎಸ್‌ವೈ ಅವರನ್ನು ಹಿಂಬಾಲಿಸಿಕೊಂಡು ಬರುತ್ತಲೇ ಇದೆ. ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ' ಎಂದಿದ್ದಾರೆ.

'ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಚ್ಚ ನ್ಯಾಯಾಲಯವು ಅವರಿಗೆ ಮಧ್ಯಂತರ ಜಾಮೀನು ನೀಡಿ 'ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ' ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿಎಸ್ ಯಡಿಯೂರಪ್ಪ ಅವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ' ಎಂದು ತಿಳಿಸಿದ್ದಾರೆ.

ಈ ವರ್ಷದ ಮಾರ್ಚ್ 14 ರಂದು ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಗುರುವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿತ್ತು. ಪೋಕ್ಸೊ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನ ನ್ಯಾಯಾಧೀಶರಾದ ರಮೇಶ್ ಅವರು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT