ನಜ್ಜು ಗುಜ್ಜಾಗಿರುವ ಕಾರು 
ರಾಜ್ಯ

Bengaluru-Mysuru expressway ನಲ್ಲಿ ಭೀಕರ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ರಾಮನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT