ಬೆಂಗಳೂರಿನಲ್ಲಿ ಭಾರಿ ಮಳೆ 
ರಾಜ್ಯ

3 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮತ್ತೆ ಸಂಜೆ ವರ್ಷಧಾರೆ: ಹವಾಮಾನ ಇಲಾಖೆ

ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೌದು.. ಮುಂದಿನ 3 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಅಂತೆಯೇ ಗಂಟೆಗೆ 40 ರಿಂದ50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರಮುಖವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಯಂತೆ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ, ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಬಿಸಿಲಿನ ತಾಪಕ್ಕೆ ಜನಜೀವನ ದುಸ್ತರವಾಗಿದೆ. ಅಲ್ಲಿನ ಜನರು ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಸಂಜೆ ವರ್ಷಧಾರೆ

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಈಗ ಮುಂದಿನ ಕೆಲವು ದಿನ ಇದೇ ರೀತಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಮಳೆಯಿಂದ ಎದುರಾಗಬಹುದಾದ ಸಮಸ್ಯೆ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನು ೫ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎನ್ನಲಾಗಿದೆ.

ಏತನ್ಮಧ್ಯೆ, ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದ್ದು, ಅದೇ ರೀತಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಇಂದಿನಿಂದ ಜೂನ್ 20 ರವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಸಂಜೆಯ ನಂತರ ಬೆಂಗಳೂರಿನಲ್ಲಿ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT