ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ 
ರಾಜ್ಯ

ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು ದುಷ್ಕರ್ಮಿಗಳ ದಾಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಕೊಲೆಯಾಗಿದೆ.

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು ದುಷ್ಕರ್ಮಿಗಳ ದಾಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಕೊಲೆಯಾಗಿದೆ.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ರೌಡಿಶೀಟರ್‌ ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬಾತನನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾರೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ ಮೃತ ಅಶೋಕ ಮಲ್ಲಪ್ಪ ಗಂಟಗಲ್ಲಿ ಕೂಡ ಸ್ಥಳೀಯವಾಗಿ ನಟೋರಿಯಸ್ ಆಗಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರಬಂದಿದ್ದ ಈತನನ್ನು ಹಳೆ ದ್ವೇಷದಿಂದ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT