ದರ್ಶನ್, ಚಿಕ್ಕಣ್ಣ ಸಾಂದರ್ಭಿಕ ಚಿತ್ರ 
ರಾಜ್ಯ

ನಟ ದರ್ಶನ್ ಪ್ರಕರಣ: ಪೊಲೀಸರ ಮುಂದೆ ಹಾಸ್ಯ ನಟ ಚಿಕ್ಕಣ್ಣ ಹೇಳಿದ್ದು ಹೀಗೆ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸರು ಸೋಮವಾರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸರು ಸೋಮವಾರ ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ಮುನ್ನಾ ಸ್ಟೋನಿ ಬ್ರೂಕ್ ಪಬ್ ನಲ್ಲಿ ದರ್ಶನ್ ಮತ್ತವರ ತಂಡ ಪಾರ್ಟಿ ನಡೆಸಿತ್ತು. ಆ ಪಾರ್ಟಿಯಲ್ಲಿ ಹಾಸ್ಯನಟ ಚಿಕ್ಕಣ್ಣ ಕೂಡಾ ಭಾಗಿಯಾಗಿದ್ದರು ಎಂಬ ಗುಮಾನಿ ಮೇರೆಗೆ ಅವರು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು.

ಸ್ಟೋನಿ ಬ್ರೂಕ್ ಪಬ್ ನಲ್ಲಿ ಮಧ್ಯಾಹ್ನ ಮಹಜರು ನಂತರ ರಾತ್ರಿ ಅನ್ನಪೂರ್ಣೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಹೇಳಿಕೆ ದಾಖಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಣ್ಣ, ದರ್ಶನ್‌ ನನ್ನನ್ನು ಊಟಕ್ಕೆ ಕರೆದಿದ್ದರು. ಹೀಗಾಗಿ ಊಟಕ್ಕೆ ಹೋಗಿದ್ದೇನೆ. ಇದು ಬಿಟ್ಟು ಬೇರೆ ಯಾವುದರ ಬಗ್ಗೆಯೂ ನನಗೆ ಮಾಹಿತಿ ಇಲ್ಲ ಎಂದು ಪೊಲೀಸರ ಮುಂದೆ ಹೇಳಿರುವುದಾಗಿ ತಿಳಿಸಿದರು.

ಊಟ ಮಾಡಿಕೊಂಡು ನಾನು ಅಲ್ಲಿಂದ ಹೊರಟೆ. ಅಲ್ಲಿ ಏನಾಯ್ತು ಅನ್ನೋದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರೇಣುಕಾಸ್ವಾಮಿ ಬಗ್ಗೆ ಯಾವುದೇ ವಿಚಾರದ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಟಿವಿಗಳಲ್ಲಿ ಬಂದ ಮೇಲೆಯೇ ಈ ವಿಚಾರದ ಬಗ್ಗೆ ಗೊತ್ತಾಯ್ತು. ಹೀಗಾಗಿ ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ದರ್ಶನ್ ಗೆಳೆಯರಾಗಿದ್ದು, ಸಾಮಾನ್ಯವಾಗಿ ಊಟಕ್ಕೆ ಸೇರುತ್ತಿರುತ್ತೇವೆ. ಅವತ್ತು ಕೂಡ ನನ್ನ ಊಟಕ್ಕೆ ಕರೆದಿದ್ದರು ನಾನು ಹೋಗಿದ್ದೆ ಅಷ್ಟೇ ಎಂದು ಪೊಲೀಸ್ ಠಾಣೆಯಲ್ಲಿ ಹೇಳಿಕೆ ದಾಖಲಿಸಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!