ಸಂಗ್ರಹ ಚಿತ್ರ 
ರಾಜ್ಯ

TNIE ವರದಿಗಾರನ ಮೇಲೆ ಹಲ್ಲೆ: BJP ಖಂಡನೆ

ಸುದ್ದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಗಾರ ಟಿಟಿ ರಕ್ಷಿತ್ ಗೌಡ ಅವರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳ ತಂಡವು ಕೋರ್ಟ್ ಹಾಲ್‌ ಹೊರಗೆ ದಾಳಿ ಮಾಡಿ, ಅವರ ಮೊಬೈಲ್ ಫೋನ್ ದೋಚಿದ ಘಟನೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಬೆಂಗಳೂರು: ಸುದ್ದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಗಾರ ಟಿಟಿ ರಕ್ಷಿತ್ ಗೌಡ ಅವರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳ ತಂಡವು ಕೋರ್ಟ್ ಹಾಲ್‌ ಹೊರಗೆ ದಾಳಿ ಮಾಡಿ, ಅವರ ಮೊಬೈಲ್ ಫೋನ್ ದೋಚಿದ ಘಟನೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟ (ಕೆಯುಡಬ್ಲ್ಯುಜೆ) ಕೂಡ ರಕ್ಷಿತ್ ಗೌಡ (23) ಅವರ ಮೇಲಿನ ಹಲ್ಲೆ ಘಟನೆಯನ್ನು ಖಂಡಿಸಿದೆ.

'X' ಖಾತೆಯಲ್ಲಿ ಪೋಸ್ಟ್ ಮಾಡಿರುವ ಒಕ್ಕೂಟ, ನಟ ದರ್ಶನ್ ಅವರನ್ನು ಹಾಜರುಪಡಿಸಿದ ನ್ಯಾಯಾಲಯದ ಹೊರಗೆ ಇದ್ದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ರಕ್ಷಿತ್ ಗೌಡ ಅವರನ್ನು 4 ಅಪರಿಚಿತ ವ್ಯಕ್ತಿಗಳು ಥಳಿಸಿದ್ದಾರೆ. ಈ ಘಟನೆಯನ್ನು ಕೆಯುಡಬ್ಲ್ಯುಜೆ ಖಂಡಿಸುತ್ತದೆ ಎಂದು ಹೇಳಿದೆ.

ಪ್ರತಿಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ನಗರದ ನ್ಯಾಯಾಲಯದಲ್ಲಿ ಮಾಧ್ಯಮದವರ ಮೇಲೆ ನಡೆದ ಹಲ್ಲೆ ಅತ್ಯಂತ ಖಂಡನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾಗಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನು ಕಸಿಯುವ ಯಾವುದೇ ಪ್ರಯತ್ನವನ್ನು ಸರ್ಕಾರ ಸಹಿಸಬಾರದು ಎಂದು ಹೇಳಿದರು.

ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕ ಸುರೇಶ್ ಕುಮಾರ್ ಕೂಡ ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ