ಅಬ್ದುಲ್ ಶಕೂರ್ 
ರಾಜ್ಯ

ಉತ್ತರ ಕನ್ನಡ: ಬನವಾಸಿಯಲ್ಲಿ ಶಂಕಿತ ಉಗ್ರ ಎನ್ಐಎ ವಶಕ್ಕೆ

ಮಂಗಳೂರು ಕುಕ್ಕರ್ ಸ್ಫೋಟ, ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಮತ್ತು ಶಿವಮೊಗ್ಗ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಂಕಿತ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬನವಾಸಿ ತಾಲೂಕಿನ ದಾಸನ ಕೊಪ್ಪ ಗ್ರಾಮದಲ್ಲಿ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಮಂಗಳವಾರ ಬಂಧನಕ್ಕೊಳಪಡಿಸಿದೆ.

ಬನವಾಸಿ (ಉತ್ತರ ಕನ್ನಡ): ಮಂಗಳೂರು ಕುಕ್ಕರ್ ಸ್ಫೋಟ, ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಮತ್ತು ಶಿವಮೊಗ್ಗ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಂಕಿತ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬನವಾಸಿ ತಾಲೂಕಿನ ದಾಸನ ಕೊಪ್ಪ ಗ್ರಾಮದಲ್ಲಿ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಮಂಗಳವಾರ ಬಂಧನಕ್ಕೊಳಪಡಿಸಿದೆ.

ಶಿರಸಿ ಮತ್ತು ಬನವಾಸಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು, ಅಬ್ದುಲ್ ಶಕೂರ್ (34) ಎಂಬಾತನನ್ನು ಬಂಧಿಸಲಾಗಿದೆ.

ದಾಸನ ಕೊಪ್ಪ ಗ್ರಾಮದವರನಾದ ಶಕೂರ್ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯನಾಗಿದ್ದ ಎಂದು ತಿಳಿದುಬಂದಿದೆ.

ಬಕ್ರೀದ್ ಆಚರಣೆಗಾಗಿ ಈತ ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ತಿಳಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ ಆತನನ್ನು ಬಂಧನಕ್ಕೊಳಪಡಿಸಿದೆ.

ಶಕೂರ್ ಅನೇಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಆನ್‌ಲೈನ್‌ನಲ್ಲಿ ಅವರೊಂದಿಗೆ ಸಂಪರ್ಕದಲ್ಲಿರುತ್ತಾನೆ ಎಂದು ಮೂಲಗಳು ತಿಳಿಸಿವೆ.

ಸುಳ್ಳು ದಾಖಲೆಗಳನ್ನು ಒದಗಿಸಿ ಈತ ಪಾಸ್‌ಪೋರ್ಟ್ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಸಂಬಂಧ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೌಲ್ವಿಯಾಗಿದ್ದ ಶಕೂರ್ 2018-19ರಲ್ಲಿ ತೀರ್ಥಳ್ಳಿಗೆ ಭೇಟಿ ನೀಡಿದ್ದು, ಆಗ ಮಂಗಳೂರು ಕುಕ್ಕರ್, ರಾಮೇಶ್ವರಂ ಕೆಫೆ ಮತ್ತು ಶಿವಮೊಗ್ಗ ಮಸೀದಿ ಸ್ಫೋಟದ ಪ್ರಮುಖ ಆರೋಪಿಯನ್ನು ಭೇಟಿಯಾಗಿದ್ದ. ಶಾಲೆಯ ಹಂತದಲ್ಲಿ ವಿದ್ಯಾಬ್ಯಾಸ ಮಾಡಿರುವ ಈತ ದುಬೈನಲ್ಲಿ ಅಡಿಗೆ ವಸ್ತುಗಳು, ಹವಾನಿಯಂತ್ರಣಗಳು ಮತ್ತು ಲೋಹಗಳ ವ್ಯವಹಾರ ನಡೆಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈತನನ್ನು ಬಂಧನಕ್ಕೊಳಪಡಿಸಿರುವ ಎನ್ಐಎ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT