ಡಿ ಕೆ ಶಿವಕುಮಾರ್  
ರಾಜ್ಯ

ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಅನಿವಾರ್ಯ, ಪ್ರಸ್ತಾಪವನ್ನು ಸಾರ್ವಜನಿಕರ ಮುಂದಿಡುತ್ತೇವೆ: ಡಿ ಕೆ ಶಿವಕುಮಾರ್

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ದರ ಕಳೆದ 14 ವರ್ಷದಿಂದ ಏರಿಕೆಯಾಗಿಲ್ಲ. ನಗರದ ಪರಿಸ್ಥಿತಿಯಲ್ಲಿ ನೀರಿನ ದರ ಹೆಚ್ಚಳ ಅನಿವಾರ್ಯವಾಗಿದೆ. ಈ ಪ್ರಸ್ತಾಪವನ್ನು ಸಾರ್ವಜನಿಕರ ಮುಂದಿಟ್ಟು ಅವರ ಅಭಿಪ್ರಾಯ ಪಡೆಯುತ್ತೇವೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ದರ ಕಳೆದ 14 ವರ್ಷದಿಂದ ಏರಿಕೆಯಾಗಿಲ್ಲ. ನಗರದ ಪರಿಸ್ಥಿತಿಯಲ್ಲಿ ನೀರಿನ ದರ ಹೆಚ್ಚಳ ಅನಿವಾರ್ಯವಾಗಿದೆ. ಈ ಪ್ರಸ್ತಾಪವನ್ನು ಸಾರ್ವಜನಿಕರ ಮುಂದಿಟ್ಟು ಅವರ ಅಭಿಪ್ರಾಯ ಪಡೆಯುತ್ತೇವೆ ಎಂದು ಬೆಂಗಳೂರು ನಗರ ಉಸ್ತುವಾರಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಮೂಲಕ ಬೆಂಗಳೂರು ನಗರದಲ್ಲಿ ನೀರಿನ ದರ ಹೆಚ್ಚಳ ನಿಶ್ಚಿತ ಎಂಬ ಸುಳಿವನ್ನು ಸಚಿವರು ನೀಡಿದ್ದಾರೆ. ಬೆಂಗಳೂರು ಜಲಮಂಡಳಿ (BWSSB) ದರ ಪರಿಷ್ಕರಣೆ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿ ಕೆ ಶಿವಕುಮಾರ್, ಬೆಂಗಳೂರು ಜಲ ಮಂಡಳಿಗೆ ಹಣ ಇಲ್ಲದೆ ವಿದ್ಯುತ್‌ ಬಿಲ್ ಕಟ್ಟಲು ಆಗುತ್ತಿಲ್ಲ, ಸಿಬ್ಬಂದಿಗೆ ಸಂಬಳ ಕೊಡುವುದಕ್ಕೂ ಕಷ್ಟವಾಗಿದೆ. ಪ್ರತಿ ವರ್ಷ ನಷ್ಟ ಆಗುತ್ತಲೇ ಇದೆ. ಅಪಾರ ಜನಸಂಖ್ಯೆ, ಕಾರ್ಖಾನೆಗಳು, ಕಚೇರಿಗಳು ಸಾಕಷ್ಟು ಇರುವ ಬೆಂಗಳೂರಿಗೆ ಕುಡಿಯುವ ನೀರು ಬೇಕು. ನೀರಿನ ದರ ಹೆಚ್ಚು ಮಾಡಬೇಕೆ ಬೇಡವೇ ಎಂದು ಸಾರ್ವಜನಿಕರೇ ಹೇಳಲಿ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ವಿದ್ಯುತ್‌ ಬೆಲೆ ಹೆಚ್ಚಿಸಿದ್ದರು. ನಮ್ಮ ಸರ್ಕಾರ ಬಂದ ಮೇಲೆ ಕಡಿಮೆ ಮಾಡಿದೆವು. ಕಡಿಮೆ ಮಾಡಿದರೆ ಮಾತೇ ಆಡುವುದಿಲ್ಲ. ದರ ಹೆಚ್ಚಿಸಿದರೆ ಮಾತನಾಡುತ್ತೀರಿ. 400 ರೂಪಾಯಿ ಇದ್ದ ಗ್ಯಾಸ್ ಸಿಲಿಂಡರ್ ಬೆಲೆ 1 ಸಾವಿರ ಆಯಿತು. 75 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100 ರೂಪಾಯಿ ಆಯಿತು. 3 ರೂಪಾಯಿ ಜಾಸ್ತಿನಾ ಅಥವಾ 30 ರೂಪಾಯಿಯಾ ಎಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಪತ್ರಕರ್ತರನ್ನು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

Dhurandhar The Revenge trailer: ಪಾಕ್‌ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?

T20 ವಿಶ್ವಕಪ್ 2026: '499 ರನ್, 34 ಸಿಕ್ಸರ್, 39 ಬೌಂಡರಿ': T20 ಇತಿಹಾಸದ ಅಪರೂಪದ ದಾಖಲೆ ಬರೆದ India vs England ಪಂದ್ಯ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

SCROLL FOR NEXT