ಚಿಕ್ಕಮಗಳೂರು: ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೂವರ ಶವಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿದ್ದು, ಮೂವರ ಶವಕ್ಕಾಗಿ ಪೊಲೀಸರ ಶೋಧ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.