ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಡವರ ಪರ ಕೆಲಸ ಮಾಡದಿದ್ದರೆ ಸೇವೆಯಲ್ಲಿರಲು ನೀವೆಲ್ಲರೂ ಅನರ್ಹರು: ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಆಶ್ರಮ ಶಾಲೆಯ ಮಕ್ಕಳು, ಆರ್ಥಿಕ ಹಿಂದುಳಿದವರು, ದಲಿತ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡದ ಅಧಿಕಾರಿಗಳು ಸೇವೆಯಲ್ಲಿರಲು ಅನರ್ಹರು ಎಂದು ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಿಡಿಕಾರಿದರು.

ಬೆಂಗಳೂರು: ಆಶ್ರಮ ಶಾಲೆಯ ಮಕ್ಕಳು, ಆರ್ಥಿಕ ಹಿಂದುಳಿದವರು, ದಲಿತ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡದ ಅಧಿಕಾರಿಗಳು ಸೇವೆಯಲ್ಲಿರಲು ಅನರ್ಹರು ಎಂದು ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಿಡಿಕಾರಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯೊಂದಿಗೆ ಮಂಗಳವಾರ ಸಿಎಂ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಗರಂ ಆಗಿ ಅಧಿಕಾರಿಗಳನ್ನು ತೀವ್ರವಾಗಿ ಸಿಎಂ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಬಳಿಕ ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, ಶೇ,99.75ರಷ್ಟು ಸಾಧನೆಯಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು - 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು.

2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.

ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಲು ಸೂಚಿಸಿದರು.

ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸಿ ಗುಡ್ಡೆಹಾಕಿಕೊಳ್ಳುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ನೀವು ಬಡವರು, ದಲಿತರು, ಆದಿವಾಸಿ, ಬುಡಕಟ್ಟು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು ಅನರ್ಹರು ಎಂದೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಪರಿಶಿಷ್ಟ ಪಂಗಡಗಳ‌ ಕಲ್ಯಾಣ ಇಲಾಖೆ ನಿರ್ದೇಶಕ ಕಲ್ಲೇಶ್ ಸೇರಿ ಇತರೆ ಅಧಿಕಾರಿಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT