ಸಂಗ್ರಹ ಚಿತ್ರ  
ರಾಜ್ಯ

ನಟ ದರ್ಶನ್ ಸೇರಿ 17 ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯ: 13 ವರ್ಷಗಳ ನಂತರ 'ಡೆವಿಲ್' ಮತ್ತೆ ಜೈಲುಪಾಲು?

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಹಾಗೂ ಅವರ ಗ್ಯಾಂಗ್ ಪಾತ್ರ ಮುಖ್ಯವಾಗಿದೆ ಎಂದು ಆರಂಭದಿಂದಲೂ ಕೇಳಿಬರುತ್ತಿದೆ. ಜೂನ್ 11ರ ಮುಂಜಾನೆ ದರ್ಶನ್ ಅವರನ್ನು ಮೈಸೂರಿನ ಹೊಟೇಲ್ ನಲ್ಲಿ ಜಿಮ್ ಮಾಡುತ್ತಿದ್ದವರನ್ನು ಬಂಧಿಸಲಾಯಿತು.

ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಯಿತು. ಅನುಮಾನ ಇರುವ ಎಲ್ಲರನ್ನೂ ಪೊಲೀಸರು ಬಂಧಿಸಿದರು. ಎರಡನೇ ಬಾರಿಗೆ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ಎದುರು ಇಂದು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.

ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರು ಮನವಿ ಮಾಡುವ ಸಾಧ್ಯತೆಯಿದೆ. ಈ ಮಧ್ಯೆ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿಹಾಕಲು 30 ಲಕ್ಷ ರೂಪಾಯಿ ನೀಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ನಿನ್ನೆ ಪೊಲೀಸ್ ಠಾಣೆಗೆ ಪತಿ ದರ್ಶನ್ ನೋಡಲು ಬಂದಿದ್ದ ಪತ್ನಿ ವಿಜಯಲಕ್ಷ್ಮಿಯನ್ನು ಪೊಲೀಸರು ಸತತ 4 ಗಂಟೆ ವಿಚಾರಣೆ ನಡೆಸಿದ್ದರು. ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ದರ್ಶನ್ ಅವರು ಜೈಲು ಪಾಲಾಗಿದ್ದರು. 14 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರು. ಈ ಬಾರಿ ಜೈಲು ಪಾಲಾದರೆ ಇದು ಚಾಲೆಂಜಿಂಗ್ ಸ್ಟಾರ್ ಜೈಲುವಾಸ ಅನುಭವಿಸುತ್ತಿರುವುದು ಎರಡನೇ ಸಲವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel