ನಟ ದರ್ಶನ್ 
ರಾಜ್ಯ

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಮಾಜಿ ಮ್ಯಾನೇಜರ್ ಗದಗದ ಮಲ್ಲಿಕಾರ್ಜುನ ಸಂಕನಗೌಡರ 2018 ರಿಂದ ನಾಪತ್ತೆ!

ಮಲ್ಲಿಕಾರ್ಜುನ ಅವರು ನಟ ದರ್ಶನ್ ಅವರಿಗೆ 2 ಕೋಟಿ ರೂ. ಹಾಗೂ ನಟ ಅರ್ಜುನ್ ಸರ್ಜಾ ಅವರಿಗೆ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಗದಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರ ವಶದಲ್ಲಿರುವ ನಟ ದರ್ಶನ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಎರಡು ತಿಂಗಳ ಹಿಂದೆ ಅನೇಕಲ್‌ನಲ್ಲಿರುವ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮ್ಯಾನೇಜರ್ ಶ್ರೀಧರ್ (35) ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಇದೀಗ ಮತ್ತೆ ಚರ್ಚೆ ಆರಂಭವಾಗಿದ್ದು, ಮತ್ತೊಬ್ಬ ಮಾಜಿ ಮ್ಯಾನೇಜರ್ ಗದಗದ ಮಲ್ಲಿಕಾರ್ಜುನ ಸಂಕನಗೌಡರ 2018ರಿಂದ ನಾಪತ್ತೆಯಾಗಿರುವುದು ಮುನ್ನೆಲೆಗೆ ಬರುತ್ತಿದೆ.

ಮಲ್ಲಿಕಾರ್ಜುನ ಅವರು ನಟ ದರ್ಶನ್ ಅವರಿಗೆ 2 ಕೋಟಿ ರೂ. ಹಾಗೂ ನಟ ಅರ್ಜುನ್ ಸರ್ಜಾ ಅವರಿಗೆ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಗದಗದ ಪಂಚಾಕ್ಷರಿನಗರದಲ್ಲಿ ನೆಲೆಸಿರುವ ಮಲ್ಲಿಕಾರ್ಜುನ ಕುಟುಂಬಸ್ಥರು, ಆತ ಎಲ್ಲಿದ್ದಾನೆ ಎಂಬುದೇ ಗೊತ್ತಿಲ್ಲ ಎನ್ನುತ್ತಿದ್ದಾರೆ. ಮಲ್ಲಿಕಾರ್ಜುನ ಎಲ್ಲಿದ್ದಾರೆಂದು ತಮಗೆ ತಿಳಿದಿಲ್ಲದ ಕಾರಣ ಅವರ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ.

ದರ್ಶನ್ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದ ನಂತರ ಮಲ್ಲಿಕಾರ್ಜುನ್ ಅವರ ಸಂಬಂಧಿಕರು ಮತ್ತು ಸ್ನೇಹಿತರು ಈಗ ಭಯದಲ್ಲಿ ಬದುಕುತ್ತಿದ್ದಾರೆ.

ಮಲ್ಲಿಕಾರ್ಜುನ್ ಅವರು ಚಲನಚಿತ್ರ ನಿರ್ಮಾಪಕರಾಗಲು ಬಯಸಿದ್ದರು ಮತ್ತು ನಟ ಶಿವ ರಾಜ್‌ಕುಮಾರ್ ಅಭಿನಯದ 'ವಾಲ್ಮೀಕಿ' ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು ಎನ್ನಲಾಗಿದೆ.

'ವಾಲ್ಮೀಕಿ' ಸೆಟ್‌ನಲ್ಲಿ ದರ್ಶನ್ ಅವರ ಸಹೋದರ ದಿನಕರ್ ಸಹ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಹೀಗಾಗಿ, ಮಲ್ಲಿಕಾರ್ಜುನ ಮತ್ತು ದರ್ಶನ್ ನಡುವೆ ಸಂಪರ್ಕ ಬೆಳೆದಿತ್ತು. ನಂತರ ಮಲ್ಲಿಕಾರ್ಜುನ ಅವರು ದರ್ಶನ್ ಅವರ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡರು ಮತ್ತು ಆ ಸಮಯದಲ್ಲಿ ದರ್ಶನ್ ಅವರಿಗೆ ತಿಳಿಯದಂತೆ 2 ಕೋಟಿ ರೂ. ತೆಗೆದುಕೊಂಡಿದ್ದರು ಮತ್ತು ‘ಪ್ರೇಮ ಬರಹ’ ಬಿಡುಗಡೆಯಾದ ನಂತರ ಸರ್ಜಾ ಅವರಿಗೆ 1 ಕೋಟಿ ರೂ. ವಂಚಿಸಿದ್ದಾರೆ ಎನ್ನಲಾಗಿದೆ. ನಾಪತ್ತೆಯಾಗಿರುವ ಮಲ್ಲಿಕಾರ್ಜುನ ವಿರುದ್ಧ ಸರ್ಜಾ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT