ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ; ಯೂಟ್ಯೂಬರ್‌ ಅಜಿತ್‌ ಭಾರ್ತಿ ವಿರುದ್ಧ ಕ್ರಮಕ್ಕೆ ಮುಂದು, ಸರ್ಕಾರದ ವಿರುದ್ದ ಬಿಜೆಪಿ ವಾಗ್ದಾಳಿ

ನೊಯ್ಡಾದಲ್ಲಿ ಪತ್ರಕರ್ತ ಮತ್ತು ಯೂಟ್ಯೂಬರ್ ಅಜೀತ್ ಭಾರ್ತಿ ಅವರನ್ನು ಬಂಧಿಸಲು ಬೆಂಂಗಳೂರು ಪೊಲೀಸರು ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಬಿಜೆಪಿ
Manjula VN
Updated On : 21 Jun 2024, 9:48 am

ಬೆಂಗಳೂರು: ನೊಯ್ಡಾದಲ್ಲಿ ಪತ್ರಕರ್ತ ಮತ್ತು ಯೂಟ್ಯೂಬರ್ ಅಜೀತ್ ಭಾರ್ತಿ ಅವರನ್ನು ಬಂಧಿಸಲು ಬೆಂಂಗಳೂರು ಪೊಲೀಸರು ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಸುಳ್ಳು ಸುದ್ದಿ ಹಂಚುತ್ತಿದ್ದ ಆರೋಪ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ರಾಜ್ಯ ಪೊಲೀಸರು ಇತ್ತೀಚೆಗೆ ಬೆಂಗಳೂರಿನಲ್ಲಿ ಅಜೀತ್ ಭಾರ್ತಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತನ್ನ ನಿವಾಸಕ್ಕೆ ಬಂದ ಕರ್ನಾಟಕ ಪೊಲೀಸರನ್ನು ನೋಯ್ಡಾ ಪೊಲೀಸರು ತಮ್ಮ ಜತೆ ಕರೆದೊಯ್ದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಯೂಟ್ಯೂಬರ್‌ನ ಮನೆಯ ಹೊರಗೆ ಕರ್ನಾಟಕ ಪೊಲೀಸರು ಮತ್ತು ನೋಯ್ಡಾ ಪೊಲೀಸರ ನಡುವೆ ಮುಖಾಮುಖಿಯಾಗಿದೆ. ಕರ್ನಾಟಕ ಪೊಲೀಸರನ್ನು ತನ್ನ ಮನೆಗೆ ಪ್ರವೇಶಿಸಲು ಅವರು ಅನುಮತಿಸಲಿಲ್ಲ ಎಂದು ಭಾರ್ತಿ ಹೇಳಿದ್ದು, ನೋಯ್ಡಾ ಪೊಲೀಸರು ಸಮಯಕ್ಕೆ ಮಧ್ಯಪ್ರವೇಶಿಸಿ ಕ್ರಮ ಕೈಗೊಂಡರು ಎಂದು ಹೇಳಲಾಗುತ್ತಿದೆ.

Advertisement

Advertisement

ಅದೇ ವೇಳೆ ಪತ್ರಕರ್ತ, ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ವಿರುದ್ಧ ಪ್ರಕರಣ ದಾಖಲಿಸುವುದಾಗಿಯೂ ಯೂಟ್ಯೂಬರ್ ತನ್ನ ಕಾಮೆಂಟ್‌ನಲ್ಲಿ ಹೇಳಿದ್ದಾರೆ.

Also Read

ನೋಯ್ಡಾ ಸುಳ್ಳು ಸುದ್ದಿ ಪ್ರಕರಣ: ಸಾಮಾಜಿಕ ಜಾಲತಾಣ influencer ಅಜಿತ್ ಭಾರ್ತಿಗೆ ಬೆಂಗಳೂರು ಪೊಲೀಸ್ ನೊಟೀಸ್

ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವಿಲಕ್ಷಣ ಕಾರಣಗಳಿಗಾಗಿ ಅಜೀತ್ ಭಾರ್ತಿ ಅವರನ್ನು ಬಂಧಿಸುವ ಪ್ರಯತ್ನವು ಸಂಪೂರ್ಣವಾಗಿ ಸರ್ವಾಧಿಕಾರಿಯಾದದ್ದು. ಬಿಜೆಪಿ ಅಜೀತ್ ಭಾರ್ತಿ ಅವರೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ಈ ಪ್ರಕರಣದ ವಿರುದ್ಧ ಹೋರಾಡಲು ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಈ ಘಟನೆಯು ಪ್ರಸ್ತುತ ಆಡಳಿತದ ಆಡಳಿತ ವೈಫಲ್ಯಕ್ಕೆ ಉದಾಹರಣೆಯಾಗಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ರಾಜ್ಯದಲ್ಲಿ ಹೈ-ಪ್ರೊಫೈಲ್ ಕೊಲೆಗಳು, ಮಹಿಳೆಯರಿಗೆ ಕಿರುಕುಳ ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಗಣನೀಯ ಏರಿಕೆ ಕಂಡಿದೆ. ಆದರೆ, ಇದನ್ನು ಸರ್ಕಾರ ನಿರ್ಲಕ್ಷಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ಪೊಲೀಸ್ ಪಡೆಯ ಅಮೂಲ್ಯ ಸಮಯ ಮತ್ತು ಸಂಪನ್ಮೂಲಗಳನ್ನು ಸಾರ್ವಜನಿಕರ ಸುರಕ್ಷತೆಯ ಬದಲಿಗೆ ರಾಜಕೀಯ ಸೇಡಿಗೆ ಬಳಸಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ತನ್ನ ನಾಗರಿಕರ ಕಲ್ಯಾಣ ಮತ್ತು ಭದ್ರತೆಯನ್ನು ಖಾತ್ರಿಪಡಿಸುವುದಕ್ಕಿಂತ ತನ್ನ ಟೀಕಾಕಾರರನ್ನು ಹತ್ತಿಕ್ಕುವತ್ತ ಹೆಚ್ಚು ಗಮನಹರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯು ಭಾರ್ತಿ ಅವರನ್ನು ರಕ್ಷಿಸಲು ಪಣ ತೊಟ್ಟಿದೆ. ರಾಜ್ಯದ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ.

ಈ ನಡುವೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಹೈಗ್ರೌಂಡ್ಸ್ ಪೊಲೀಸರು, ಅಜೀತ್ ಭಾರ್ತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆಯೇ ಹೊರತು ಬಂಧಿಸಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments