ಸಿಎಂ ಸಿದ್ದರಾಮಯ್ಯ 
ರಾಜ್ಯ

SSLC ಫಲಿತಾಂಶ ಕುಸಿತ: ವಿಜಯನಗರ ಡಿಡಿಪಿಐ, ಬಿಇಒ ಅಮಾನತಿಗೆ ಸಿಎಂ ಸೂಚನೆ

ಎಸ್​​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿದಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ವಿಜಯನಗರ: ಎಸ್​​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿದಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಹೊಸಪೇಟೆಯಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ 10ನೆ ಸ್ಥಾನದಿಂದ 27ನೆ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಡಿಡಿಪಿಐ ಹಾಗೂ ಬಿಇಒ ಅವರನ್ನು ಅಮಾನತು ಮಾಡುವಂತೆ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ ಕುಸಿದಿರುವುದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು?. ಎಸ್ಎಸ್ಎಲ್ ಸಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ನೀವೇ ಕಾರಣ ಎಂದು ಸಿಎಂ, ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಬಾರಿ ಶೇ. 20 ರಷ್ಟು ಗ್ರೇಸ್​ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದೆ ಎಂದರೆ ನಿಮ್ಮ ಸಾಧನೆ ಏನು? ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಸಿಎಂ ಪ್ರಶ್ನಿಸಿದ್ದಾರೆ. ಇನ್ನು ಮುಂದಿನ ವರ್ಷ ಕೃಪಾಂಕ ಕೊಡಬಾರದು ಎಂದು ಹೇಳಿದ್ದೇನೆ ಎಂದರು.

10 ರಿಂದ 27ನೆ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವಾ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಪ್ರಶ್ನಿಸಿದ ಸಿದ್ದರಾಮಯ್ಯ, ಸಭೆ ಮಧ್ಯದಲ್ಲೆ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿದರು. ಅಲ್ಲದೆ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT