ಹಾಸನ: ಅಸಹಜ ಲೈಂಗಿಕ ಕಿರುಕುಳ ಪ್ರಕರಣದ ದೂರು ನೀಡಿದ್ದ ವ್ಯಕ್ತಿಯ ವಿರುದ್ಧವೇ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಆಪ್ತ ಸುಲಿಗೆ ಪ್ರಕರಣದಲ್ಲಿ ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತ ಎಂದು ಹೇಳಲಾದ ವ್ಯಕ್ತಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ದೂರು ನಿಡಿದ್ದು, ಸೂರಜ್ ರೇವಣ್ಣ ನನ್ನ ಮೇಲೆ ಸಲಿಂಗ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲಾಗಿದೆ.
ಡಾ. ಸೂರಜ್ ವಿರುದ್ದ ಬೆಂಗಳೂರಿನಲ್ಲಿ ದೂರು ನೀಡಿದ ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲಿಸಲಾಗಿದ್ದು, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಸೂರಜ್ ಆಪ್ತ ಶಿವಕುಮಾರ್ ಎಂಬುವವರು ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐದು ಕೋಟಿ ರೂಪಾಯಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪ ಮಾಡಿ ದೂರು ಕೊಡಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರೊ ಬಗ್ಗೆ ಉಲ್ಲೇಖಿಸಿ ದೂರು ಕೊಡಲಾಗಿದ್ದು, ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಿಸಲಾಗಿದೆ.
ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ, ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ಥ ಹೋಗಿದ್ದ, ಕೆಲಸ ಕೇಳಿ ವಾಪಸ್ಸು ಬಂದ ಬಳಿಕ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.