ರಾಜ್ಯ

ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ!

ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೆಚ್ ​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಲು ಕಾರಣರಾಗಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಪರ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದು, ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಇನ್ನಷ್ಟು ಪ್ರಬಲವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ಅವರ ಪತ್ನಿ ವಿಜಯಲಕ್ಷ್ಮಿ ನೇಮಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೆಚ್ ​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಲು ಕಾರಣರಾಗಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ.

ಆರೋಪಿಯೊಬ್ಬನ ಪರವಾಗಿ ಇಬ್ಬರು ವಕೀಲರು ವಾದ ಮಂಡಿಸುವ ಅವಕಾಶ ಇದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ವಾದ ಮಂಡಿಸಿದರೆ, ದರ್ಶನ್ ಪರವಾಗಿ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್