ರೋಹಿಣಿ ಸಿಂಧೂರಿ 
ರಾಜ್ಯ

ಭೂ ಕಬಳಿಕೆ ಆರೋಪ: IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು!

ಕರ್ನಾಟಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ಭೂಕಬಳಿಕೆ ದೂರು ದಾಖಲಾಗಿದೆ.

ಬೆಂಗಳೂರು: ಕರ್ನಾಟಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ಭೂಕಬಳಿಕೆ ದೂರು ದಾಖಲಾಗಿದೆ.

ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ (Bollywood Singer Lucky Ali) ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(IAS officer Rohini Sindhuri) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮೂಲಗಳ ಪ್ರಕಾರ ಬೆಂಗಳೂರಿನ (Bengaluru) ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ (Land grabbing) ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪ ಮಾಡಿದ್ದಾರೆ.

ಈ ಸಂಬಂಧ ಕರ್ನಾಟಕ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದು, ಜೊತೆಗೆ ಈ ಸಂಬಂಧ ತಮ್ಮ ಟ್ವೀಟರ್​ ಖಾತೆಯಲ್ಲಿ ದೂರಿನ ಪ್ರತಿಯನ್ನು ಶೇರ್ ಮಾಡಿಕೊಂಡಿದ್ದಾರೆ.

ಈ ಹಿಂದೆಯೂ ದೂರು ನೀಡಿದ್ದ ಗಾಯಕ

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್​ಗಳನ್ನು ಮಾಡಿದ್ದ ಅವರು, ಯಲಹಂಕ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದರು.

ಅಲ್ಲದೇ ಅಂದಿನ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರಿಗೆ ಟ್ಯಾಗ್ ಮಾಡಿದ್ದರು. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ.

ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜೊತೆಗೆ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT