ಆಚಾರ್ಯ ಚಿನ್ಮಯಾನಂದ ಸ್ವಾಮಿಜೀ 
ರಾಜ್ಯ

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ; ಸ್ವಾಮೀಜಿ ಬರ್ಬರ ಕೊಲೆ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.

ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮ ಇದ್ದು ಹಲವು ವರ್ಷಗಳಿಂದ ಜಾಗದ ಕುರಿತಂತೆ ವಿವಾದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೋರ್ಟ್​ಗೆ ದಾಖಲೆ ಸಹಿತ ಹೋಗುವ ವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.

ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಚಿನ್ಮಯಾನಂದ ಅವರನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಮೃತಪಟ್ಟಿದ್ದಾರೆ.

ಈ ಕೊಲೆ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನು ಮಾಲೂರು ಪೊಲೀಸ್​ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ