ಕೆರೆಯಲ್ಲಿ ಬೋಟ್ ಸಹಾಯದಿಂದ ಹುಡುಕಾಟ 
ರಾಜ್ಯ

ತುಮಕೂರು: 50 ವರ್ಷದ ವಿವಾಹಿತನ ಜತೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಆತ್ಮಹತ್ಯೆ ಶಂಕೆ

50 ವರ್ಷದ ವಿವಾಹಿತ ಪುರುಷನೊಂದಿಗೆ 19 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಶನಿವಾರ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಅವರು ಚಪ್ಪಲಿಗಳು ಪತ್ತೆಯಾಗಿವೆ.

ತುಮಕೂರು: ಮೂರು ದಿನಗಳ ಹಿಂದೆ 50 ವರ್ಷದ ವಿವಾಹಿತ ಪುರುಷನೊಂದಿಗೆ 19 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಶನಿವಾರ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಅವರು ಚಪ್ಪಲಿಗಳು ಪತ್ತೆಯಾಗಿವೆ.

ಕೆರೆಯ ಬಳಿ ಕಾರು ನಿಲ್ಲಿಸಿ ಮೊಬೈಲ್​ಗಳನ್ನು ಕಾರಿನಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ(19) ಎಂಬ ಕಾಲೇಜು ವಿದ್ಯಾರ್ಥಿನಿ, ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಎಂಬ ವಿವಾಹಿತ ಪುರುಷನೊಂದಿಗೆ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದಳು.

ವಿವಾಹಿತ ವ್ಯಕ್ತಿಯೊಂದಿಗೆ ಯುವತಿ ಪ್ರೇಮಕ್ಕೆ ಅವರ ಕುಟುಂಬದವರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಬೋಟ್ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಈಜು ಪಟುಗಳನ್ನು ಕರೆಯಿಸಿ ಕೆರೆಯಲ್ಲಿ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್‌ಐ ರೇಣುಕಾ ಯಾದವ್ ಹಾಗೂ ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT