ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರ: ಕಲುಷಿತ ನೀರು ಕುಡಿದು ಓರ್ವ ಸಾವು; ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ್ದು, ಐವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮುಳಬಾಗಲಿನ ಮಿತ್ತೂರು ಪಂಚಾಯಿತಿ ವ್ಯಾಪ್ತಿಯ ಮೆಣಜೇನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ವೆಂಕಟರಮಣಪ್ಪ (65) ಎಂದು ಗುರುತಿಸಲಾಗಿದೆ.

ಕೋಲಾರ: ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ್ದು, ಐವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮುಳಬಾಗಲಿನ ಮಿತ್ತೂರು ಪಂಚಾಯಿತಿ ವ್ಯಾಪ್ತಿಯ ಮೆಣಜೇನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ವೆಂಕಟರಮಣಪ್ಪ (65) ಎಂದು ಗುರುತಿಸಲಾಗಿದೆ.

ಗ್ರಾಮಸ್ಥರಾದ ರಾಜಮ್ಮ ಮತ್ತು ವೆಂಕಟರಾಮಪ್ಪ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಜಯಮ್ಮ ಮತ್ತು ರತ್ನಮ್ಮ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲಗಳ ಪ್ರಕಾರ, ಕುಡಿಯುವ ನೀರು ಸರಬರಾಜು ಮಾರ್ಗಕ್ಕೆ ಕೊಳಚೆ ನೀರು ಸೇರಿರುವುದು ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನೀರು ಕುಡಿದ ನಂತರ ಹಲವು ಗ್ರಾಮಸ್ಥರು ಅಸ್ವಸ್ಥರಾಗಿದ್ದು, ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಗ್ರಾಮಸ್ಥರು ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಆತ ಮೃತಪಟ್ಟಿದ್ದಾನೆ.

ಪಂಚಾಯಿತಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನ ಖಂಡಿಸಿ ಗ್ರಾಮಸ್ಥರು ಶವವನ್ನು ಊರಿನ ಮುಖ್ಯರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು. ಒಬ್ಬರ ಸಾವಿಗೆ ಕಾರಣವಾದ ಸಮಸ್ಯೆಯನ್ನು ಪಂಚಾಯಿತಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹಲವು ತಿಂಗಳಿನಿಂದ ಓವರ್‌ಹೆಡ್‌ ಟ್ಯಾಂಕ್‌ ಸ್ವಚ್ಛಗೊಳಿಸದ ಕಾರಣ ಚರಂಡಿಯಲ್ಲಿ ಕಸ ತುಂಬಿ ದುರ್ವಾಸನೆ ಬೀರುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ, ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್ ಹಾಗೂ ಜಿಲ್ಲಾಸ್ಪತ್ರೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆ ಕುರಿತು ಕೋಲಾರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ