ಸಂಜನಾ ಗಲ್ರಾನಿ 
ರಾಜ್ಯ

Sandalwood Drugs Case: ನಟಿ ಸಂಜನಾ ಗಲ್ರಾನಿ, ಶಿವ ಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್, FIR ರದ್ದತಿಗೆ ಕೋರ್ಟ್ ಆದೇಶ!

ನಟಿ ಸಂಜನಾ ಗಲ್ರಾನಿ ಹಾಗೂ ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಅದೇಶ ನೀಡಿದೆ.

ಬೆಂಗಳೂರು: ಈ ಹಿಂದೆ ಭಾರಿ ಸದ್ದು ಮಾಡಿದ್ದ ಸ್ಯಾಂಡಲ್‌ ವುಡ್ ಡ್ರಗ್ಸ್ ಕೇಸ್‌ನಲ್ಲಿ (Sandalwood Drugs Case) ನಟಿ ಸಂಜನಾ ಗಲ್ರಾನಿ ಹಾಗೂ ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದ್ದು, FIR ರದ್ದತಿಗೆ ಕೋರ್ಟ್ ಆದೇಶ ನೀಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಈ ಹಿಂದೆ ನಟಿ ಸಂಜನಾ ಗಲ್ರಾನಿ ಸೇರಿದಂತೆ ಸಿಸಿಬಿ ಅಧಿಕಾರಿಗಳು ಹಲವು ನಟಿಯರು ಸೇರಿ ಡ್ರಗ್ ಪೆಡ್ಲರ್‌ಗಳ ಬಂಧಿಸಿದ್ದರು. ಇದೀಗ ನಟಿ ಸಂಜನಾ ಗಲ್ರಾನಿ ಹಾಗೂ ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ನಿರಾಳರಾಗಿದ್ದು, ಇಬ್ಬರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಅದೇಶ ನೀಡಿದೆ.

ಏನಿದು ಪ್ರಕರಣ?

2020ರ ಆಗಸ್ಟ್ 26ರಂದು ಸೆಲಿಬ್ರಿಟಿಗಳು, ಸಿನಿ ನಟ, ನಟಿಯರು ಹಾಗೂ ಉದ್ಯಮಿಗಳ ಮಕ್ಕಳು ಡ್ರಗ್ಸ್‌ ಪಾರ್ಟಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಎನ್‌ಸಿಬಿ ಅಧಿಕಾರಿಗಳು ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ರಾಯಲ್ ಸೂಟ್ಸ್ ಹೋಟೆಲ್ ಮೇಲೆ ದಾಳಿ ಮಾಡಿದ್ದರು.

ಆಗ ಅಪಾರ ಪ್ರಮಾಣದ ಮಾದಕ ವಸುಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅನೂಪ್, ರವೀಂದ್ರನ್ ಹಾಗೂ ಡಿ. ಅಂಕಿತ ಎಂಬ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದರು. ನಂತರ ತನಿಖೆ ವೇಳೆ ಇವರು ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಮಾದಕ ವಸ್ತು ಪೂರೈಕೆ ಮಾಡಲಾಗುತ್ತಿದ್ದರು ಎಂಬ ಸ್ಫೋಟಕ ಸಂಗತಿ ಹೊರಬಿದ್ದಿತ್ತು. ಬಳಿಕ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿತ್ತು.

ಮಾದಕ ವಸ್ತು ಜಾಲದ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ಸೇರಿ ಹಲವರ ಬಂಧನವಾಗಿತ್ತು. ನಂತರ ಜೈಲು ಸೇರಿದ್ದ ಸಂಜನಾಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿ ಜಾಮೀನು ಸಿಕ್ಕಿತ್ತು.

ಆದರೆ, ಎಫ್‌ಐಆರ್ ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸೋಮವಾರ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ ಎಫ್‌ಐಆರ್ ರದ್ದುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT