ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂಗೌಡ 
ರಾಜ್ಯ

ಹಾಸನ ಪೆನ್‌ಡ್ರೈವ್ ವಿಡಿಯೋ ಹಂಚಿಕೆ ಆರೋಪ: ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲು; ಪ್ರೀತಂಗೌಡ ಮೇಲೂ ದೂರು!

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಹಾಸನ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್​​ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಹೆಚ್​ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತೊಂದು ಪ್ರಕರಣ ದಾಖಲಾಗಿದ್ದು, ಇದೇ ವೇಳೆ ಪ್ರೀತಂ ಗೌಡ ವಿರುದ್ಧವೂ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಹಾಸನ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿದೆ.

ಇದೀಗ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರೀತಂ ಗೌಡ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸಂತ್ರಸ್ತೆಯೊಬ್ಬರ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ದಾಖಲು ಮಾಡಿಕೊಳ್ಳಲಾಗಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಜೂನ್ 29ರವರೆಗೂ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರೀತಂಗೌಡ ಅವರು, ಎಫ್ಐಆರ್ ದಾಖಲು ವಿಚಾರ ನನದೆ ಗೊತ್ತಿಲ್ಲ. ಈ ಬಗ್ಗೆ ತಿಳಿದುಕೊಂಡ ನಂತರ ಪ್ರತಿಕ್ರಿಯೆ ನೀಡುತ್ತೇನೆಂದು ಹೇಳಿದ್ದಾರೆ.

ಹಾಸನ ಪೆನ್‌ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ ಎಂದು ಎಚ್‌ಡಿ ರೇವಣ್ಣ ಕುಟುಂಬ ಆರೋಪ ಮಾಡುತ್ತಿತ್ತು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಆರೋಪ ಕೇಳಿಬಂದಿತ್ತು. ಈ ಪ್ರಕರಣ ರಾಜಕೀಯವಾಗಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರ ಇದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆದರೆ. ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ. ಸದ್ಯ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ಸಹೋದರ ಸೂರಜ್ ರೇವಣ್ಣ ಬಂಧನ ಆಗಿದೆ. ಇವರ ವಿರುದ್ಧವೂ ಲೈಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ