ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆ 
ರಾಜ್ಯ

ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ ಸಿದ್ದರಾಮಯ್ಯ

ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು.

ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT