ಸೂರಜ್ ರೇವಣ್ಣ 
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ: JDS MLC Suraj Revanna ವಿರುದ್ಧ 2ನೇ ಪ್ರಕರಣ ದಾಖಲು, ಶಾಕ್ ಕೊಟ್ಟ ಆಪ್ತ!

ಸೂರಜ್ ರೇವಣ್ಣ ಆಪ್ತ ಎಂದು ಹೇಳಲಾದ ಶಿವಕುಮಾರ್ ಈ ಹಿಂದೆ MLC ಸೂರಜ್ ರೇವಣ್ಣ ಪರವಾಗಿ JD(S) ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಅವರ ವಿರುದ್ಧವೇ ಶಿವಕುಮಾರ್ 2ನೇ ಪ್ರಕರಣ ದಾಖಲಿಸಿದ್ದಾರೆ.

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣಗೆ ಅವರ ಆಪ್ತನೇ ಶಾಕ್ ನೀಡಿದ್ದು, 2ನೇ ಪ್ರಕರಣ ದಾಖಲಾಗಿದೆ.

ಹೌದು.. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಎರಡನೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಚ್ಚರಿ ಎಂದರೆ ಸೂರಜ್ ರೇವಣ್ಣ ಆಪ್ತ ಎಂದು ಹೇಳಲಾದ ಶಿವಕುಮಾರ್ ಈ ಹಿಂದೆ MLC ಸೂರಜ್ ರೇವಣ್ಣ ಪರವಾಗಿ JD(S) ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಅವರ ವಿರುದ್ಧವೇ ಶಿವಕುಮಾರ್ 2ನೇ ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ರಾತ್ರಿ ಸೂರಜ್ ರೇವಣ್ಣ ವಿರುದ್ಧ ಮೊದಲ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಮರುದಿನವೇ ಸೂರಜ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು. ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನ ನೀಡಲಾಗಿತ್ತು. ಸೋಮವಾರ ನ್ಯಾಯಾಲಯ ಅವರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

2ನೇ FIR

"ಸೂರಜ್ ರೇವಣ್ಣ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ" ಎಂದು ಹಾಸನದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸೂರಜ್ ವಿರುದ್ಧವೇ ತಿರುಗಿ ಬಿದ್ದ ಆಪ್ತ

ಸೂರಜ್ ರೇವಣ್ಣ ಪರವಾಗಿ ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಇದೀಗ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ. ಇದರಿಂದ ಸೂರಜ್​ ಮತ್ತೊಂದು ಸಂಕಷ್ಟ ಎದುರಾಗಿದೆ.​ ಅಸಹಜ ಲೈಂಗಿಕ ಕ್ರಿಯೆ ಪ್ರಕರಣದಲ್ಲಿ ಸೂರಜ್​ ರೇವಣ್ಣ (Suraj Revanna Case) ​​ ಪರವಾಗಿ ನಿಂತು ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್​ ಪತ್ತೆಯಾಗಿದ್ದಾರೆ.

ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ ಶಿವಕುಮಾರ್, ಸೂರಜ್ ರೇವಣ್ಣ ಬಂಧನವಾಗುತ್ತಿದ್ದಂತೆಯೇ ದಿಢೀರ್ ನಾಪತ್ತೆಯಾಗಿದ್ದ. ಆದ್ರೆ, ಇಂದು (ಜೂನ್ 25) ಶಿವಕುಮಾರ್ ಏಕಾಏಕಿ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಅಚ್ಚರಿ ಎಂಬಂತೆ ನೇರವಾಗಿ ಹೊಳೆನರಸೀಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಸೂರಜ್ ರೇವಣ್ಣ ವಿರುದ್ಧವೇ ದೂರು ನೀಡಿದ್ದಾರೆ.

ಶಿವಕಮಾರ್ ವಿರುದ್ಧವೂ ದೂರು ದಾಖಲು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ. ಹೀಗಾಗಿ ಸೂರಜ್‌ ಪ್ರಕರಣದಲ್ಲಿ ಶಿವಕುಮಾರ್ ಎರಡನೇ ಆರೋಪಿಯಾಗಿದ್ದಾನೆ.

ದೊಡ್ಡಗೌಡರ ಕುಟುಂಬದಲ್ಲಿ ಕೋಲಾಹಲ ಎಬ್ಬಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣ

ವೈದ್ಯರಾಗಿರುವ ಸೂರಜ್ ರೇವಣ್ಣ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮೊಮ್ಮಗರಾಗಿದ್ದು, ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಅವರ ಹಿರಿಯ ಪುತ್ರರಾಗಿದ್ದಾರೆ. ಜೆಡಿಎಸ್ ಪಕ್ಷದ ಎಂಎಲ್‌ಸಿ ಕೂಡ ಆಗಿರುವ ಸೂರಜ್ ರೇವಣ್ಣ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹಿರಿಯ ಸಹೋದರರಾಗಿದ್ದಾರೆ.

ಇದೇ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅವರನ್ನು ಚಿತ್ರೀಕರಿಸಿದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದಾರೆ.

ಮಾತ್ರವಲ್ಲದೇ ಸೂರಜ್ ಮತ್ತು ಪ್ರಜ್ವಲ್ ಅವರ ಪೋಷಕರಾದ ರೇವಣ್ಣ ಮತ್ತು ಭವಾನಿ ಅವರು ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಜಾಮೀನಿನ ಮೇಲೆ ಹೊರಗಿದ್ದಾರೆ.

ರೇವಣ್ಣ ವಿರುದ್ಧವೂ ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT