ಉದಯನಿಧಿ ಸ್ಟಾಲಿನ್ 
ರಾಜ್ಯ

ಸನಾತನ ಧರ್ಮಕ್ಕೆ ಅವಮಾನ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರು; ಜಾಮೀನು ಮಂಜೂರು

ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು.

ಬೆಂಗಳೂರು: ಸನಾತನ ಧರ್ಮ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಮಂಗಳವಾರ ಬೆಂಗಳೂರಿನ ಮೆಟ್ರೋಪಾಲಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ ಉದಯನಿಧಿ, ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 4 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೋನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!