ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಗ್ರಾಮೀಣ ಪ್ರದೇಶಗಳ 3 ಲಕ್ಷ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜಿನಿಯರುಗಳು ಈ ತಿಂಗಳಿನ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದರು.

ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್‌ ಬಳಿಯ ಕನಸಗೇರಿ ಗ್ರಾಮದಲ್ಲಿ ಈಚೆಗೆ ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ, ಗ್ರಾಮಗಳಲ್ಲಿ ಪರ್ಯಾಯ ಜಲಮೂಲಗಳನ್ನು ಬಳಸಿ ಶುದ್ಧ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಸ್ವಸ್ಥರಾದ ಗ್ರಾಮಸ್ಥರ ಆರೋಗ್ಯದ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದರು.

ಗ್ರಾಮೀಣ ನೀರು ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರಿಗೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್‌ ಮಾಹಿತಿ ನೀಡಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜೂನಿಯರ್‌ ಎಂಜಿನಿಯರ್‌ ರಾಜ್ಯದ 3,000 ಗ್ರಾಮಗಳಿಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?