ನಟ ದರ್ಶನ್ - ಪತ್ನಿ ವಿಜಯಲಕ್ಷ್ಮಿ(ಸಂಗ್ರಹ ಚಿತ್ರ) 
ರಾಜ್ಯ

'ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ, ಶಾಂತಿಯಿಂದ ಇರಿ': ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಮನವಿ

ಈ ಮಧ್ಯೆ, ಸೆಂಟ್ರಲ್‌ ಜೈಲಿನಲ್ಲಿರುವ ತಮ್ಮ ಪತಿ ದರ್ಶನ್‌ರನ್ನು ವಿಜಯಲಕ್ಷ್ಮಿ ಅವರು ಭೇಟಿಯಾಗಿ, ಮಾತನಾಡಿಸಿಕೊಂಡು ಬಂದಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರನ್ನು ಜೂನ್ 11 ರಂದು ಬಂಧಿಸಲಾಗಿದ್ದು, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಈ ಮಧ್ಯೆ, ಸೆಂಟ್ರಲ್‌ ಜೈಲಿನಲ್ಲಿರುವ ತಮ್ಮ ಪತಿ ದರ್ಶನ್‌ರನ್ನು ವಿಜಯಲಕ್ಷ್ಮಿ ಅವರು ಭೇಟಿಯಾಗಿ, ಮಾತನಾಡಿಸಿಕೊಂಡು ಬಂದಿದ್ದಾರೆ. ಈ ವೇಳೆ ದರ್ಶನ್ ತುಂಬ ಭಾವುಕರಾಗಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಈಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದು, ದರ್ಶನ್ ಅಭಿಮಾನಿಗಳಿಗೆ ಶಾಂತಿಯ ಪಾಠ ಮಾಡಿದ್ದಾರೆ.

'ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು" ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ.. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದ ಇರೋಣ.." ಎಂದು ಮನವಿ ಮಾಡಿಕೊಂಡಿದ್ದಾರೆ.

ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಬಗ್ಗೆ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನ ಅವರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ' ಎಂದು ಪೋಸ್ಟ್ ಅನ್ನು ಬರೆದುಕೊಂಡದ್ದಾರೆ.

ಇದನ್ನು ಇಂಗ್ಲೀಷ್‌ನಲ್ಲಿಯೂ ತರ್ಜುಮೆ ಮಾಡಿ ಮತ್ತೊಂದು ಪೋಸ್ಟ್ ಅನ್ನೂ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT