ಬೆಂಗಳೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು (Turuvekere Police) ಬುಧವಾರ (ಜೂನ್ 26) ಬೊಮ್ಮನಹಳ್ಳಿ ಬಾಬು ಅವರನ್ನು ಫ್ರೇಜರ್ ಟೌನ್ ನಿವಾಸದ ಬಳಿ ಬಂಧಿಸಿದ್ದಾರೆ.
ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್ ಹಾಗೂ ತಂಡದಿಂದ ಬಂಧಿಸಲಾಗಿದೆ.
ಕಳ್ಳತನದ ಆರೋಪಿ ಉದಯ್ ಅಲಿಯಾಸ್ ಅಶೋಕ್, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ ತುರುವೇಕೆರೆ ಪೊಲೀಸರು ಆರೋಪಿಸಿದ್ದಾರೆ. ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪತ್ನಿ ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿಯಲ್ಲಿ ಉದಯ್ ಅಲಿಯಾಸ್ ಅಶೋಕ್ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು.
ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಆಗಮಿಸಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.