ಡೆಂಗ್ಯೂ ಜ್ವರ 
ರಾಜ್ಯ

ನಗರದಲ್ಲಿ ಡೆಂಗ್ಯೂ ಕೇಸ್ ಹೆಚ್ಚಳ: ಜೂನ್ 28 ರಿಂದ ಮನೆ-ಮನೆ ಸಮೀಕ್ಷೆಗೆ BBMP ಮುಂದು!

ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ಹರಡುತ್ತದೆ. ಈ ನಿಟ್ಟಿನಲ್ಲಿ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆ ಮಾಡಲು, ಜನರಲ್ಲಿ ಜಾಗೃತಿ ಮೂಡಿಸಲುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣ ನಿಯಂತ್ರಿಸುವ ಕುರಿತು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎಎನ್​ಎಂಗಳು ಹಾಗೂ ಲಿಂಕ್ ವರ್ಕರ್ಸ್​ಗಳು ಸೇರಿದಂತೆ 1000 ಮನೆಗಳಿಗೊಂದು ಬ್ಲಾಕ್ ಅನ್ನು ರಚಿಸಿಕೊಳ್ಳಬೇಕು. ನಂತರ ಲಾರ್ವಾ ಇರುವ ತಾಣಗಳನ್ನು ಗುರುತಿಸುವುದು, ನಾಗರಿಕರಲ್ಲಿ ಅರಿವು ಮೂಡಿಸುವುದು ಹಾಗೂ ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಲು ತಿಳಿಸುವುದು ಸೇರಿದಂತೆ ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ಹರಡುತ್ತದೆ. ಈ ನಿಟ್ಟಿನಲ್ಲಿ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮನೆಯಲ್ಲಿರುವ ಸಲಕರಣೆಳಲ್ಲಿ ಹೆಚ್ಚು ದಿನಗಳ ಕಾಲ ನೀರಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗುತ್ತದೆ. ಅದನ್ನು ತಡೆಯುವ ನಿಟ್ಟಿನಲ್ಲಿ ಪಾಲಿಕೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಗರದಲ್ಲಿ 2024 ಜನವರಿಯಿಂದ ಜೂನ್‌ವರೆಗೆ 1230 ಪ್ರಕರಣಗಳು ಕಂಡುಬಂದಿದ್ದು, ವಲಯವಾರು ಮೈಕ್ರೋ ಪ್ಲಾನ್ ಮಾಡಿಕೊಂಡು ಡೆಂಘೀ ಹರಡುವಿಕೆಯನ್ನು ನಿಯಂತ್ರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ ಚಟುವಟಿಕೆಗಳನ್ನು ಹೆಚ್ಚಾಗಿ ನಡೆಸಲಾಗುತ್ತಿದೆ. ಇದನ್ನು ಸರ್ಕಾರದ ಮಟ್ಟದಲ್ಲೂ ಮಾಡಲಾಗುತ್ತಿದ್ದು, ಪಾಲಿಕೆಯಿಂದಲೂ ಆಯಾ ವಲಯಗಳಲ್ಲಿ ಹಲವಾರು ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರ ಪ್ರಕರಣಗಳು ಕಂಡುಬಂದರೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎನ್.ಎಸ್ 1 ಟೆಸ್ಟ್ ಕಿಟ್ ಮೂಲಕ ಪರೀಕ್ಷೆ ಮಾಡಿ ಖಚಿತವಾದ ಬಳಿಕ ರಕ್ತದ ಮಾದರಿ ಸಂಗ್ರಹಿಸಿಕೊಂಡು ಪ್ರಯೋಗಾಲಯಗಳಿಗೆ ಕಳುಹಿಸಿಕೊಡಲಾಗುವುದು ಎಂದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ 28 ಲಕ್ಷ ಮನೆಗಳ ಪೈಕಿ, 14 ಲಕ್ಷ ಮನೆಗಳು ಬಡ ವರ್ಗವಿರುವ ಪ್ರದೇಶ, ಜನ ಸಂಖ್ಯೆ ಹೆಚ್ಚಿರುವ ಪ್ರದೇಶ ಹಾಗೂ ತಗ್ಗು ಪ್ರದೇಶಗಳಲ್ಲಿರುವ 14 ಲಕ್ಷ ಮನೆಗಳಿಗೆ 15 ದಿನಕ್ಕೊಮ್ಮೆ ಭೇಟಿ ನೀಡಿ ಲಾರ್ವಾ ಉತ್ಪತ್ತಿ ತಾಣಗಳು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಲಾಗುವುದು. ಮನೆ-ಮನೆ ಸಮೀಕ್ಷೆ ಮಾಡುವ ಸಲುವಾಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್​ಎಸ್ಎಸ್ ಸ್ವಯಂ ಸೇವಕರನ್ನು ನಿಯೋಜಿಸಿಕೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದರು.

ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮನೆ-ಮನೆಗಳಿಗೆ ಭೇಟಿ ನೀಡುವ ಜೊತೆಗೆ ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ಘನತ್ಯಾಜ್ಯ, ಬೃಹತ್ ನೀರುಗಾಲುವೆ, ರಸ್ತೆ ಮೂಲಭೂತ ಸೌಕರ್ಯ ವಿಭಾಗ ಸೇರಿದಂತೆ ಇನ್ನಿತರ ಇಲಾಖೆಗಳ ಜೊತೆ ವಲಯವಾರು ಸಮನ್ವಯ ಸಾಧಿಸಿ ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ನೀರು ನಿಲ್ಲದಂತೆ ಕ್ರಮವಹಿಸಲಾಗುವುದು. ಮಹದೇವಪುರ, ದಕ್ಷಿಣ ವಲಯ ಹಾಗೂ ಪೂರ್ವ ವಲಯಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಎಲ್ಲೆಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದೆಯೋ ಅಲ್ಲೆಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT