ಕೆಆರ್ ಎಸ್ ಡ್ಯಾಂ 
ರಾಜ್ಯ

ರಾಜ್ಯದಲ್ಲಿ ಮುಂಗಾರು ಚುರುಕು: ಹಲವಡೆ ವರುಣನ ಅಬ್ಬರ; KRS ಡ್ಯಾಂ ಒಳಹರಿವಿನಲ್ಲಿ‌ ಹೆಚ್ಚಳ

ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ.

ಮಂಡ್ಯ: ಕಳೆದ ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ‌ ಹೆಚ್ಚಳವಾಗಿದೆ. ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ.

ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 1,615 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದ್ದು, ನಿನ್ನೆ ಕೆಆರ್‌ಎಸ್ ಡ್ಯಾಂಗೆ 2,241 ಕ್ಯೂಸೆಕ್ ಒಳಹರಿವು ಬಂದಿತ್ತು. ಇಂದು ಕೆಆರ್‌ಎಸ್‌ಗೆ 3,856 ಕ್ಯೂಸೆಕ್ ನೀರು ಒಳಹರಿವು ಬಂದಿದೆ. ಒಳಹರಿವು ಹೆಚ್ಚಳ ಹಿನ್ನೆಲೆ ನೀರಿನ ಮಟ್ಟದಲ್ಲೂ ಹೆಚ್ಚಳವಾಗಿದೆ.

124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್‌ ಡ್ಯಾಂ 88.40 ಅಡಿ ಭರ್ತಿಯಾಗಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂ‌ನಲ್ಲಿ 15.007 ಟಿಎಂಸಿ ನೀರು ಸಂಗ್ರಹವಾಗಿದ್ದು, ಡ್ಯಾಂನ ಹೊರ ಹರಿವು 472 ಕ್ಯೂಸೆಕ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!