ನಿನ್ನೆ ಗುರುವಾರ ರಾಜ್ಯ ಸಂಸದರೊಂದಿಗೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ  
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಬರಬೇಕಿದೆ; ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ: ಸಿಎಂ

ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್ ನಲ್ಲಿ 5,300 ಕೋಟಿ ನೀಡುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದರೂ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ.

ನವದೆಹಲಿ: ಬಾಕಿ ಉಳಿದಿರುವ ಬರ ಪರಿಹಾರ ಮೊತ್ತ ಸೇರಿದಂತೆ ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಬಗ್ಗೆ ಪಕ್ಷಭೇದ ಮರೆತು ಕರ್ನಾಟಕದ ಒಳಿತಿಗಾಗಿ ಸಂಸದರೆಲ್ಲರೂ ಕೇಂದ್ರ ಸರ್ಕಾರದ ಒತ್ತಡ ಹೇರಬೇಕೆಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್ ನಲ್ಲಿ 5,300 ಕೋಟಿ ನೀಡುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದರೂ ಇನ್ನೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರದಿಂದ ಅಸಮರ್ಪಕ ತಾಂತ್ರಿಕ ಸಮಸ್ಯೆಯಿಂದ ಎಂದು ಹೇಳಿ ಇದುವರೆಗೆ ಹಣ ನೀಡಿಲ್ಲ. ಆದರೆ ಆ ತರಹದ ವಿಷಯವೇ ಇಲ್ಲ, ನಮಗೆ ಕೇಂದ್ರ ಸರ್ಕಾರ ತಿಳಿಸಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ 5,300 ಕೋಟಿಯನ್ನು ರಾಜ್ಯಕ್ಕೆ ನೀಡಲು ಬಾಕಿಯಿದೆ ಎಂದು ಒಪ್ಪಿಕೊಂಡಿದ್ದಾರೆ. ಇದನ್ನು ರಾಷ್ಟ್ರದ ಯೋಜನೆಯನ್ನಾಗಿ ಘೋಷಿಸಬೇಕೆಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಹೇಳಿದ್ದರು. ಕೇಂದ್ರದಿಂದ ಹಣ ಬರುವ ಆಶಾಭಾವನೆಯಿದೆ ಎಂದರು.

ಮೇಕೆದಾಟು ಯೋಜನೆ 2018 ರಿಂದ ಬಾಕಿ ಇದೆ. ಡಿಪಿಆರ್ ಮಾಡಿ, 9 ಸಾವಿರ ಕೋಟಿ ರೂ. ಅಂದಾಜು ವೆಚ್ಚವಾಗಲಿದೆ. ನ್ಯಾಯಾಲಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮೇಕೆದಾಟು ಮಾಡಲಿಕ್ಕೆ ಯಾವ ತಕರಾರು ಇಲ್ಲ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಅನುಕೂಲವಾಗಲಿದೆ. ತಮಿಳುನಾಡಿನವರು ಕೋರ್ಟ್​ನಲ್ಲಿ ಕೇಸ್ ಹಾಕಿದ್ದಾರೆ. ಆದರೆ ಯೋಜನೆಗೆ ಯಾವುದೆ ತಡೆ ನೀಡಿಲ್ಲ. ಅದನ್ನು ಕೂಡ ಕೇಂದ್ರ ಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮೇಕೆದಾಟು ಯೋಜನೆಯಿಂದ ಕುಡಿಯುವ ನೀರು, ವಿದ್ಯುತ್ ಉತ್ಪಾದನೆಗೆ ಸಹಾಯಕವಾಗಲಿದೆ. ನಮ್ಮ ಪ್ರದೇಶದಲ್ಲಿ ಹೆಚ್ಚುವರಿ ನೀರು ಸಂಗ್ರಹಿಸಲು ಮೇಕೆದಾಟು ಅವಶ್ಯಕವಾಗಿದೆ. 2022ರಲ್ಲಿ 490 ಟಿಎಂಸಿ ಹೆಚ್ಚುವರಿ ನೀರು ಹರಿದು ಹೋಗಿದೆ. ಹೆಚ್ಚುವರಿ ನೀರು ಬಳಿಸಿಕೊಳ್ಳಲು ಎರಡು ರಾಜ್ಯಗಳಿಗೆ ಸಹಾಯಕವಾಗಲಿದೆ ಎಂದರು.

ಕೃಷ್ಣ ನೀರು ಹಂಚಿಕೆ ವಿಚಾರವಾಗಿ ಗೆಜೆಟ್ ನೊಟಿಫಿಕೇಷನ್ ಆಗಿಲ್ಲ. ಗೆಜೆಟ್ ನೊಟಿಫಿಕೇಷನ್ ಆಗಲು ಕೇಂದ್ರ ಸರಕಾರ ಸುಪ್ರೀಂಕೋರ್ಟ್​ನಲ್ಲಿ ಹೇಳಬೇಕು. ಇದನ್ನು ಕೂಡ ಕೇಂದ್ರ ಮಂತ್ರಿಗಳ ಗಮನಕ್ಕೆ ತಂದಿದ್ದೇವೆ ಎಂದು ಮಾಹಿತಿ ನೀಡಿದರು.

ಮಹದಾಯಿ ಕುಡಿಯುವ ನೀರಿನ ಯೋಜನೆ ನ್ಯಾಯಾಲಯದಲ್ಲಿ ಇದೆ ಅಂತ ಹೇಳಿದ್ದಾರೆ. ಗೆಜೆಟ್ ನೊಟಿಫಿಕೇಷನ್ ಆಗಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಅನುಮತಿ ಬೇಕಿದೆ. ವಿಷಯ ಕೇಂದ್ರ ಸರಕಾರದ ಮುಂದೆ ಇದೆ. ನ್ಯಾಯಾಲಯದಲ್ಲಿ ಕೇಸ್ ಇದೆ ಎಂದು ನೆಪ ಹೇಳಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಕರ್ನಾಟಕಕ್ಕೆ ಅನುದಾನದಲ್ಲಿ ಅನ್ಯಾಯ: 15ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿ ವರದಿ ಪಡೆದಿದ್ದಾರೆ. ಕರ್ನಾಟಕದಲ್ಲಿ ಜನಸಂಖ್ಯೆ ಕಂಟ್ರೋಲ್ ಮಾಡಿದ್ದೇವೆ. 1971ರ ಜನಸಂಖ್ಯಾ ವರದಿ ಮಾನದಂಡವಾಗಬೇಕು. ಜನಸಂಖ್ಯೆ ನಿಯಂತ್ರಣ ಮಾಡಿದವರಿಗೆ ಮಾರಕ ಆಗಬಾರದು. ಇದರಿಂದ ಸುಮಾರು 23 ಪರ್ಸೆಂಟ್ ಕೋತಾ ಆಗಿದೆ. ಕರ್ನಾಟಕದಿಂದ 4.5 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಸ್ ಬರುವುದು 12 ಪರ್ಸೆಂಟ್ ಮಾತ್ರ. 16ನೇ ಹಣಕಾಸು ಆಯೋಗದ ಮುಂದೆ ಮಂಡಿಸಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಕ್ಕೆ ವಿಶೇಷ ಅನುದಾನವನ್ನು ಕೇಂದ್ರ ಕೊಟ್ಟಿಲ್ಲ. ನಮ್ಮ ಸರಕಾರದಲ್ಲೂ ಪ್ರಯತ್ನ ಮಾಡಿದ್ದೇವೆ, ಬಿಎಸ್​ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇದ್ದಾಗಲೂ ಪ್ರಯತ್ನ ಮಾಡಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT