ಸಾಂದರ್ಭಿಕ ಚಿತ್ರ  
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಕೆ: ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ. ನಿನ್ನೆ ಭಾರೀ ಮಳೆಯಿಂದಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು.

ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಲಾಗಿದ್ದು, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

ಉಡುಪಿಯಲ್ಲಿ ರಜೆ ಇಲ್ಲ: ಡಿಸಿ

ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರೂ ನಿರೀಕ್ಷಿತ ಮಳೆಯಾಗಿಲ್ಲ. ಹೀಗಾಗಿ ಇಂದು ಶಾಲಾ-ಕಾಲೇಜುಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದ್ದು, ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ 5 ದಿನ ಭಾರೀ ಮಳೆ: ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್‌ ತಂತಿಗಳಿಂದ ದೂರವಿರಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT