ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ online desk
ರಾಜ್ಯ

ಬಿಜೆಪಿ ಶಾಸಕ ಹರೀಶ್ ಪೂಂಜಾ, 64 ಮಂದಿಗೆ ಬೆಂಗಳೂರು ವಿಶೇಷ ಕೋರ್ಟ್ ಸಮನ್ಸ್

ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ 64 ಮಂದಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ 64 ಮಂದಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಶಾಸಕರು ಮತ್ತಿತರಿಗೆ ಸಮನ್ಸ್ ಜಾರಿಯಾಗಿದೆ. ಬೆಳ್ತಂಗಡಿಯ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನವನ್ನು ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿದ್ದ ಹರೀಶ್ ಪೂಂಜಾ ಮತ್ತಿತ್ತರರು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

ಸಮನ್ಸ್ ಪ್ರಕಾರ ಜು.10 ರಂದು ಹರೀಶ್ ಪೂಂಜಾ ಮತ್ತಿತ್ತರು ಕೋರ್ಟ್ ಗೆ ಹಾಜರಾಗಬೇಕಿದೆ. ಘಟನೆಗೆ ಸಂಬಂಧ ಬೆಳ್ತಂಗಡಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೊದಲ ಪ್ರಕರಣದಲ್ಲಿ 28 ವ್ಯಕ್ತಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದ್ದರೆ, ಎರಡನೇ ಪ್ರಕರಣದ್ಲಲಿ 37 ಮಂದಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ಮೊದಲ ಆರೋಪಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಕಾರ್ಯಕರ್ತರೊಂದಿಗೆ ತೆರಳಿ ಅಕ್ರಮ ಕ್ವಾರಿ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಶಶಿರಾಜ್ ಶೆಟ್ಟಿ ಅವರನ್ನು ಬಿಡುಗಡೆ ಮಾಡಲು ಒತ್ತಡ ಪೊಲೀಸರಿಗೆ ಮೇ.20 ರಂದು ಹಾಕಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT