ಮಂಗಳೂರು: ಬೆಳ್ತಂಗಡಿಯಲ್ಲಿ ವಿದ್ಯುತ್ ತಗುಲಿ ಯುವತಿ ಸಾವು
ಮೃತ ಮಹಿಳೆಯನ್ನು ಪ್ರತೀಕ್ಷಾ ಶೆಟ್ಟಿ ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾಮವೊಂದರಲ್ಲಿ 21 ವರ್ಷದ ಯುವತಿಯೊಬ್ಬರು ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಪ್ರತೀಕ್ಷಾ ಶೆಟ್ಟಿ ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಮಹಿಳೆ ಪಾರ್ಸೆಲ್ ತೆಗೆದುಕೊಳ್ಳಲು ಮನೆಯಿಂದ ಹೊರಗೆ ಬಂದಿದ್ದ ವೇಳೆ ರಸ್ತೆಯಲ್ಲಿ ವಿದ್ಯುತ್ ತಂತಿ ತಗುಲಿದೆ.
ಆಕೆಯೊಂದಿಗಿದ್ದ ಪ್ರತೀಕ್ಷಾಳ ತಂದೆ ಮಗಳನ್ನು ರಕ್ಷಿಸಲು ಯತ್ನಿಸಿದ್ದು, ಅವರಿಗೂ ಗಾಯಗಳಾಗಿವೆ.
Also Read
ಮಂಗಳೂರು: ವಿದ್ಯುತ್ ಪ್ರವಹಿಸಿ ಇಬ್ಬರು ಸಾವು, ಭರ್ತಿಯಾಗಿ ಹರಿದ ಕುಮಾರಧಾರಾ ನದಿ, ಉಡುಪಿ, ಚಿಕ್ಕಮಗಳೂರಲ್ಲೂ ಮಳೆ
ಮೃತ ಯುವತಿ ಶಿಬಾಜೆ ಗ್ರಾಮದ ಬರ್ಗುಳಾ ನಿವಾಸಿಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.