ಅಪಘಾತ 
ರಾಜ್ಯ

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆಂಬ್ಯುಲೆನ್ಸ್-ಬೈಕ್ ಡಿಕ್ಕಿ; ಮೂವರ ದುರ್ಮರಣ

ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಶಿವಮೊಗ್ಗ: ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಮೃತ ದುರ್ದೈವಿಗಳು. ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ.

ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ಮುಂಜಾನೆ ಹಾವೇರಿ ಜಿಲ್ಲೆಯ ಗುಡ್ಡೇನಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ ಸಂಭವಿಸಿತ್ತು. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು 13 ಮಂದಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ