ನವಜಾತ ಶಿಶು(ಸಾಂಕೇತಿಕ ಚಿತ್ರ) 
ರಾಜ್ಯ

ಬೆಂಗಳೂರು: ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ!

ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು: ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೆಸ್‌ ರೈಲಿನ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆಯಾಗಿದೆ. ಜೂನ್ 26ರಂದು ಮುಂಜಾನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗು ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪರಾರಿಯಾಗಿದ್ದಾರೆ. ಮಹಿಳೆಗೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ಬಿಳಿ ಬಟ್ಟೆಯಲ್ಲಿ ನವಜಾತ ಗಂಡು ಮಗುವನ್ನು ಸುತ್ತಿ ಡಸ್ಟ್ ಬಿನ್​ಗೆ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ.

ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರೈಲು ಬೆಳಗ್ಗೆ 11 ಗಂಟೆ ಸುಮಾರಿಗೆ ಯಲಹಂಕ ತಲುಪಿದಾಗ, ಪೊಲೀಸರು ಭ್ರೂಣವನ್ನು ಹೊರತೆಗೆದು ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಿದರು. ಸ್ವಲ್ಪ ಸಮಯದ ನಂತರ ರೈಲು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಯಾರು ಕೃತ್ಯ ಎಸಗಿದ್ದರೂ ತಕ್ಷಣ ಗುರುತಿಸುವುದು ತುಂಬಾ ಕಷ್ಟ. ನಾವು ರೈಲು ಕಾರ್ಯಾಚರಣೆಯನ್ನು ತಡೆಹಿಡಿಯಲಾಗುವುದಿಲ್ಲ. ಇದರಿಂದ ಉಳಿದ ರೈಲುಗಳ ಕಾರ್ಯಾಚರಣೆಗೆ ಸಮಸ್ಯೆ ಎದುರಾಗಲಿದೆ ಎಂದು ಅಧಿಕಾರಿಗಳು ಹೇಳಿದರು.

ಇದೀಗ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 318 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಮತ್ತು ಚೀನಾ 'ಸ್ನೇಹಿತರಾಗಿರುವುದೇ' ಸರಿಯಾದ ಆಯ್ಕೆ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

Dharmasthala Case: NIA ತನಿಖೆ ಅಗತ್ಯವಿಲ್ಲ, SITಗೆ ಸ್ವಾತಂತ್ರ್ಯ ನೀಡಲಾಗಿದೆ; ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆ; ಪ್ರವಾಹ, ಭೂಕುಸಿತದ ಬಗ್ಗೆ IMD ಎಚ್ಚರಿಕೆ

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಬೆಂಗಳೂರು: ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ BMTC ಬಸ್ ಕಂಡೆಕ್ಟರ್; ನೆಟ್ಟಿಗರು ಆಕ್ರೋಶ, Video!

SCROLL FOR NEXT