ಸಂಗ್ರಹ ಚಿತ್ರ 
ರಾಜ್ಯ

ನಗರದಲ್ಲಿ ಡೆಂಗ್ಯೂ ಹೆಚ್ಚಳ: ಸೊಳ್ಳೆ ಸಂತತಿ ನಾಶಕ್ಕೆ ಫಾಗಿಂಗ್‌ ಕಾರ್ಯಾಚರಣೆ ಆರಂಭ

ಫಾಗಿಂಗ್‌ ಮೂಲಕ ಒಂದು ಹಂತದವರೆಗೆ ಡೆಂಗ್ಯೂ, ಮಲೇರಿಯಾ ಬಾಧಿಸಿದ ರೋಗಿಗಳಿಗೆ ಕಚ್ಚಿದ ಸೊಳ್ಳೆಗಳನ್ನು ನಾಶಪಡಿಸಲು ಸಾಧ್ಯವಾಗುವುದು.

ಬೆಂಗಳೂರು: ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ನಗರ ವ್ಯಾಪ್ತಿಯಲ್ಲಿ ಹಾಗೂ ಹೊರ ವಲಯದಲ್ಲಿ ರೋಗಗಳ ಹರಡುವಿಕೆಗೆ ಕಾರಣವಾದ ಸೊಳ್ಳೆ ಸಂತತಿಗಳನ್ನು ನಾಶಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಫಾಗಿಂಗ್‌ ಕಾರ್ಯಾಚರಣೆ ಆರಂಭಿಸಿದೆ.

ಫಾಗಿಂಗ್‌ ಮೂಲಕ ಒಂದು ಹಂತದವರೆಗೆ ಡೆಂಗ್ಯೂ, ಮಲೇರಿಯಾ ಬಾಧಿಸಿದ ರೋಗಿಗಳಿಗೆ ಕಚ್ಚಿದ ಸೊಳ್ಳೆಗಳನ್ನು ನಾಶಪಡಿಸಲು ಸಾಧ್ಯವಾಗುವುದು.

ಸಮೀಕ್ಷೆ ಬಳಿಕ ಆರೋಗ್ಯ ಇಲಾಖೆ ಫಾಗಿಂಗ್ ಕಾರ್ಯಾಚರಣೆ ಆರಂಭಿಸಿದೆ. ಜೂನ್ ಮೊದಲ ಹದಿನೈದು ದಿನಗಳ ಸುಮಾರು 7.6 ಲಕ್ಷ ಮನೆಗಳು ಸೇರಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ 12.04 ಲಕ್ಷ ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 2.12 ಲಕ್ಷ ಮನೆಗಳನ್ನು ಸಮೀಕ್ಷೆ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ 3.12 ಲಕ್ಷ ಮನೆಗಳನ್ನು ಇದೇ ಅವಧಿಯಲ್ಲಿ ಪರಿಶೀಲಿಸಲಾಗಿದೆ ಎಂದು ತಿಳಿದುಬಂದಿದೆ.

ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ಒಟ್ಟು 1.39 ಕೋಟಿ ಮನೆಗಳನ್ನು ಸಮೀಕ್ಷೆ ಮಾಡಲಾಗಿದ್ದು, ಜೂನ್‌ನಲ್ಲಿ ಮೊದಲ ಎರಡು ವಾರಗಳಲ್ಲಿ 1.18 ಕೋಟಿ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯಾದ್ಯಂತ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಈ ಸಮೀಕ್ಷೆ ನಡೆಸುತ್ತಿದ್ದು, ಅಧಿಕಾರಿಗಳು ಪರೀಕ್ಷಾ ಕಿಟ್‌ಗಳು, ಫಾಗಿಂಗ್ ಕೆಮಿಕಲ್‌ ಮತ್ತು ಲಾರ್ವಿಸೈಡ್‌ಗಳನ್ನು ಸಕಾಲಿಕ ಬಳಕೆಯನ್ನು ಖಚಿತಪಡಿಸುತ್ತಿದ್ದಾರೆ.

ಜನವರಿಯಿಂದ ರಾಜ್ಯದಲ್ಲಿ ಡೆಂಗ್ಯೂವಿನಿಂದ ಒಟ್ಟು ಐದು ಸಾವುಗಳು ವರದಿಯಾಗಿದ್ದು, ಹಾವೇರಿ, ಧಾರವಾಡ, ಹಾಸನ, ಶಿವಮೊಗ್ಗ ಮತ್ತು ಕಾರವಾರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಏತನ್ಮಧ್ಯೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಡೆಂಗ್ಯೂವಿನಿಂದ ಎರಡು ಸಾವು ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ, ಸಾವಿಗೆ ನಿಖರವಾದ ಕಾರಣವನ್ನು ತಿಳಿಯಲು ಡೆತ್ ಆಡಿಟ್ ನಡೆಸಲು ಮುಂದಾಗಿದ್ದು, ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT