ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳ್ತಂಗಡಿಯಲ್ಲಿ ಕಾರು ಅಪಘಾತ; ಗೇಮಿಂಗ್ ಸೆಂಟರ್ ಮಾಲೀಕ ಸಾವು

ಮೃತರನ್ನು ಉದ್ಯಮಿ ಪ್ರಮೋದ್ ನಾಯಕ್ ಅವರ ಪುತ್ರ 35 ವರ್ಷದ ಪ್ರಜ್ವಲ್ ನಾಯಕ್ ಎಂದು ಗುರುತಿಸಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಗೇಮಿಂಗ್ ಸೆಂಟರ್ ಮಾಲೀಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಉದ್ಯಮಿ ಪ್ರಮೋದ್ ನಾಯಕ್ ಅವರ ಪುತ್ರ 35 ವರ್ಷದ ಪ್ರಜ್ವಲ್ ನಾಯಕ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಪ್ರಜ್ವಲ್ ನಾಯಕ್ ಅವರ ಎಸ್‌ಯುವಿ ಕಾರು ರಸ್ತೆ ವಿಭಜಕ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಗಳಿಗೆ ಅಪ್ಪಳಿಸಿದೆ. ಭೀಕರ ಅಪಘಾತದಲ್ಲಿ ಪ್ರಜ್ವಲ್ ನಾಯಕ್ ಅವರ ಎದೆ, ತಲೆ ಮತ್ತು ಭುಜಕ್ಕೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್