ಡೆಂಗ್ಯೂ ಜ್ವರ 
ರಾಜ್ಯ

ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ: ಬೆಂಗಳೂರಲ್ಲಿ 27 ವರ್ಷದ ಯುವಕ ಸಾವು

ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾನೆ.

ಬೆಂಗಳೂರು: ಮಹಾಮಾರಿ ಡೆಂಗ್ಯೂಗೆ ಬೆಂಗಳೂರಿನಲ್ಲಿ 27 ವರ್ಷದ ಯುವಕ ಬಲಿಯಾಗಿದ್ದನೆ. ಕಗ್ಗದಾಸಪುರ ಮೂಲದವರಾದ 27 ವರ್ಷದ ಯುವಕ ಅಭಿಲಾಷ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾನೆ.

ಬಿಬಿಎಂಪಿ ಪೂರ್ವ ವಲಯದಲ್ಲಿ ತಮಿಳುನಾಡು ಮೂಲದ 80 ವರ್ಷದ ವೃದ್ಧೆ ನೀರಜಾ ದೇವಿ ಮತ್ತು ಕಗ್ಗದಾಸಪುರ ಮೂಲದವರಾದ 27 ವರ್ಷದ ಯುವಕ ಅಭಿಲಾಷ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದೇವಿ ಕೂಡ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ, ಬೆಂಗಳೂರಿನಲ್ಲಿ ಸಂಭವಿಸಿದೆ. ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ. ಕಳೆದ ಎರಡು ವಾರಗಳಲ್ಲಿ 1,000 ಗಡಿಯನ್ನು ದಾಟಿದ ಡೆಂಗ್ಯೂ ಪ್ರಕರಣಗಳ ಏರಿಕೆಯ ಮಧ್ಯೆ ಸಾವುಗಳು ವರದಿಯಾಗಿವೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2,457 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸುಮಾರು 5,187 ಡೆಂಗ್ಯೂ ಕೇಸ್​ಗಳಿವೆ. ಹಾವೇರಿ, ಮೈಸೂರು ಸೇರಿದಂತೆ ಜಿಲ್ಲೆ ಜಿಲ್ಲೆಯಲ್ಲೂ ಜನ ಡೆಂಗ್ಯೂಯಿಂದ ಬಳಲುತ್ತಿದ್ದಾರೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ