ವೀರಪ್ಪ ಮೊಯ್ಲಿ - ಹಂಸ ಮೊಯ್ಲಿ 
ರಾಜ್ಯ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.

ರಾಜಕೀಯ ಕಾರ್ಯ ಹಿನ್ನೆಲೆಯಲ್ಲಿ ಛತ್ತೀಸ್​ಗಢ್​ ಪ್ರವಾಸದಲ್ಲಿದ್ದ ವೀರಪ್ಪ ಮೊಯ್ಲಿ ಅವರು ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದಾರೆ. ನಾಳೆ ಬೆಳಗ್ಗೆ ಮಾಜಿ ಸಿಎಂ ಪುತ್ರಿಯ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.

ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಭರತನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು. ಕೇವಲ ಭರತನಾಟ್ಯ ಕಲಾವಿದೆ ಅಲ್ಲದೆ ಸಿನಿಮಾನಿ ರಂಗದಲ್ಲೂ ಅವರು ಗುರುತಿಸಿಕೊಂಡಿದ್ದರು. ದೇವದಾಸಿಯರ ಜೀವನಾಧಾರಿತ ತಮಿಳು ಚಿತ್ರ ‘ಶೃಂಗಾರಂ’ನಲ್ಲಿ ಅವರು ಅಭಿನಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT