ಬೆಂಗಳೂರು: ಚಿತ್ರಮಂದಿರಗಳು ಮತ್ತು ಸಬ್ಸಿಡಿ ಬಗ್ಗೆ ಗಮನ ಹರಿಸಿ, ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಚಿತ್ರರಂಗದ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರವನ್ನು ಸರ್ಕಾರದಿಂದ ನೀಡಲಾಗುವುದು ಎಂದರು.
ಕನ್ನಡದಲ್ಲಿ ಓಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜೊತೆ ಮಾತನಾಡುತ್ತೀನಿ. ಡಾ.ರಾಜ್‍ಕುಮಾರ್ ಕನಸಿನಂತೆ ಖಂಡಿತಾ ಒಂದು ಫಿಲ್ಮ್ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ,
ನೆನ್ನೆ ದೆಹಲಿಗೆ ಹೋಗಿದ್ದೆ. ಇವತ್ತು ಬರೋ ಸಾಧ್ಯತೆ ಕಮ್ಮಿ ಇತ್ತು.. ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರ ಗೌರವವಿದ್ದು, ಮಿಸ್ ಮಾಡದೇ ಬರಬೇಕು ಅಂತಾ ಬಂದಿದ್ದೀನಿ ಎಂದರು.