ಈಶ್ವರ್ ಖಂಡ್ರೆ 
ರಾಜ್ಯ

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್ ಗೆ ಅನುಮತಿ: ಈಶ್ವರ ಖಂಡ್ರೆ

ಮೆಕ್ಕೆಜೋಳದ ಸಾರದಿಂದ ತಯಾರಿಸುವ ಕೈಚೀಲಗಳು 6 ತಿಂಗಳುಗಳಲ್ಲಿ ಇಟ್ಟಲ್ಲಿಯೇ ಕರಗಿ ಹೋಗುತ್ತವೆ ಎಂದು ಸಭೆಗೆ ಪರಿಸರ ಅಧಿಕಾರಿಗಳು ವಿವರಿಸಿದರು.

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ ತುರ್ತು ಕ್ರಮ ಕೈಗೊಳ್ಳಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ, ಸುಟ್ಟರೆ ವಾತಾವರಣವನ್ನೇ ಕಲುಷಿತಗೊಳಿಸುವ ಏಕ ಬಳಕೆ ಪ್ಲಾಸ್ಟಿಕ್ ಈ ಪರಿಸರಕ್ಕೆ ಮಾರಕವಾಗಿದ್ದು. ಇದಕ್ಕೆ ಪರ್ಯಾಯವಾಗಿ ಜೈವಿಕವಾಗಿ ಕೊಳೆಯುವಂತಹ ಉತ್ಪನ್ನದ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ ಎಂದರು.

ಈ ನಿಟ್ಟಿನಲ್ಲಿ ಜೈವಿಕವಾಗಿ ವಿಘಟನೆಯಾಗುವ ಸಸ್ಯಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಚೀಲಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ತೊಡಕಾಗಿರುವ ಕರ್ನಾಟಕ ಸರ್ಕಾರದ 2016ರ ಅಧಿಸೂಚನೆಗೆ ತಿದ್ದುಪಡಿ ತಂದು ಇಲ್ಲವೆ ಹಿಂಪಡೆದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಮೆಕ್ಕೆಜೋಳದ ಸಾರದಿಂದ ತಯಾರಿಸುವ ಕೈಚೀಲಗಳು 6 ತಿಂಗಳುಗಳಲ್ಲಿ ಇಟ್ಟಲ್ಲಿಯೇ ಕರಗಿ ಹೋಗುತ್ತವೆ ಎಂದು ಸಭೆಗೆ ಪರಿಸರ ಅಧಿಕಾರಿಗಳು ವಿವರಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಈ ಕೈಚೀಲಗಳು ಪರಿಸರಕ್ಕೆ ಹಾನಿಕಾರಕವಲ್ಲ ಮತ್ತು ವೈಜ್ಞಾನಿಕವಾಗಿ ವಿಘಟನೆಯಾಗುತ್ತದೆ ಎಂದು ಸಾಬೀತಾಗಿದ್ದಲ್ಲಿ, ಇದಕ್ಕೆ ಶೀಘ್ರ ಅನುಮತಿ ನೀಡಿ ಎಂದರು. ಈ ಪೋಲಿಮರ್ ಕೈಚೀಲಗಳ ದರ ಕೂಡ ಪ್ರಸ್ತುತ ಲಭ್ಯವಿರುವ ಏಕ ಬಳಕೆ ಪ್ಲಾಸ್ಟಿಕ್ ಕೈಚೀಲಗಳ ದರದಲ್ಲೇ ಲಭ್ಯವಾದರೆ ಯಾರೂ ಆಗ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಖರೀದಿಸುವುದಿಲ್ಲ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT