ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ)
ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ) 
ರಾಜ್ಯ

ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ನ್ಯಾಯಾಲಯ

Manjula VN

ಕಲಬುರಗಿ: ಚಿತ್ತಾಪುರದಲ್ಲಿ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್‌ನ ಕಲಬುರಗಿ ಪೀಠವು ಗುರುವಾರ ತೆರವುಗೊಳಿಸಿದೆ.

ಸೂಲಿಬೆಲೆ ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಕಲಬುರಗಿಯತ್ತ ಬರುತ್ತಿದ್ದರು. ಅವರಿಗೆ ಜಿಲ್ಲೆಯ ಗಡಿ ಪ್ರವೇಶಿಸದಂತೆ ಪೊಲೀಸರು ಕಮಲಾಪುರ ಬಳಿ ತಡೆಯೊಡ್ಡಿದರು. ತಡರಾತ್ರಿ ಕಲಬುರಗಿ ಉಪವಿಭಾಗಾಧಿಕಾರಿ ರೂಪಿಂದರ್ ಕೌರ್ ಅವರು ಸೂಲಿಬೆಲೆ ಜಿಲ್ಲೆ ಪ್ರವೇಶಕ್ಕೆ ನಿಷೇಧ ವಿಧಿಸಿ ಆದೇಶ ಹೊರಡಿಸಿದ್ದರು. ಅಲ್ಲದೇ, ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಷಾಷಾವಲಿ ಅನುಮತಿ ನೀಡಿರಲಿಲ್ಲ.

ಇದನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ನ್ಯಾಯಪೀಠವು ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಲು ಕೆಲ ಷರತ್ತುಗಳನ್ನು ವಿಧಿಸಿ, ಅನುಮತಿ ನೀಡಿತು.

ನ್ಯಾಯಾಲಯದ ಆದೇಶ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಕೋರ್ಟ್ ಅನುಮತಿ ನೀಡಿದೆ, ಕೊನೆಗೂ ಸಂವಿಧಾನ ಗೆದ್ದಿತು ಎಂದು ಹೇಳಿದ್ದಾರೆ.

SCROLL FOR NEXT