ಹೈಕೋರ್ಟ್ 
ರಾಜ್ಯ

ಜಾತಿ ಗಣತಿ ವರದಿ ಸ್ವೀಕಾರಕ್ಕೆ ಆಕ್ಷೇಪ: ಹೈಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ (ಕೆಎಸ್‌ಸಿಬಿಸಿ) ಅಧ್ಯಕ್ಷರಾಗಿದ್ದ ಎಚ್‌ ಕಾಂತರಾಜು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿ (ಜಾತಿ ಗಣತಿ) ಸಲ್ಲಿಕೆ ತಡೆಗೆ ಕೋರಿ ಹೈಕೋರ್ಟ್ಲ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಇಂದು ವಿಚಾರಣೆಗೆ ಬರಲಿವೆ.

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ (ಕೆಎಸ್‌ಸಿಬಿಸಿ) ಅಧ್ಯಕ್ಷರಾಗಿದ್ದ ಎಚ್‌ ಕಾಂತರಾಜು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿ (ಜಾತಿ ಗಣತಿ) ಸಲ್ಲಿಕೆ ತಡೆಗೆ ಕೋರಿ ಹೈಕೋರ್ಟ್ಲ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಇಂದು ವಿಚಾರಣೆಗೆ ಬರಲಿವೆ.

ಕೆಎಸ್‌ಸಿಬಿಸಿ ಹಾಲಿ ಅಧ್ಯಕ್ಷರಾದ ಕೆ ಜಯಪ್ರಕಾಶ್‌ ಹೆಗ್ಡೆ ಅವರು ಇಂದು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ಓದನಹಳ್ಳಿಯ ವಕೀಲ ಓ ಕೆ ರಘು ಪರವಾಗಿ ಹಾಜರಾಗಿದ್ದ ವಕೀಲ ಅಭಿಷೇಕ್‌ ಕುಮಾರ್ ಅವರು ತುರ್ತಾಗಿ ಮಧ್ಯಂತರ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠದ ಮೆಮೊ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ನಾಳೆ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿತು. ರಾಜ್ಯ ಸರ್ಕಾರವು ಕಾಂತರಾಜು ಅವರ ನೇತೃತ್ವದಲ್ಲಿ ಸಮಿತಿ ರಚಿಸಿ, ಸಮೀಕ್ಷೆ ನಡೆಸಲು ಆದೇಶಿಸಿತ್ತು. ಫೆಬ್ರವರಿ 29ರಂದು ವರದಿ ಸಲ್ಲಿಸಲಾಗುತ್ತಿದೆ ಎಂಬ ಮಾಹಿತಿ ಅರ್ಜಿದಾರರಿಗೆ ಲಭ್ಯವಾಗಿದ್ದು, ವರದಿ ಸಲ್ಲಿಕೆ ಮಾಡಿದರೆ ಅರ್ಜಿಯು ಅಮಾನ್ಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಲಿದ್ದು, ಪ್ರಕರಣವನ್ನು ಪರಿಗಣಿಸಬೇಕು ಎಂದು ಮೆಮೊದಲ್ಲಿ ಕೋರಲಾಗಿದೆ.

ಕಾಂತರಾಜು ಅವರ ನೇತೃತ್ವದ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ವರದಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಆದೇಶಿಸಬೇಕು. ಕರ್ನಾಟಕ ಹಿಂದುಳಿದ ವರ್ಗಗಳ (ತಿದ್ದುಪಡಿ) ಕಾಯಿದೆ 2014ರ ಸೆಕ್ಷನ್‌ 3ರ ಮೂಲಕ ಸೇರ್ಪಡಿಸಲಾಗಿರುವ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಾಯಿದೆ 1995ರ ಸೆಕ್ಷನ್‌ 9(ಐ) ಅನ್ನು ರದ್ದುಪಡಿಸಬೇಕು. ಎಲ್ಲಾ ಸಮುದಾಯಗಳ ಜಾತಿ ಗಣತಿ ನಡೆಸುವಂತೆ 2014ರ ಜನವರಿ 23ರಂದು ಸರ್ಕಾರ ಮಾಡಿರುವ ಆದೇಶ ಅಸಾಂವಿಧಾನಿಕ ಎಂದು ಘೋಷಿಸಬೇಕು.

ಸರ್ಕಾರದ ಆದೇಶದ ಅನ್ವಯ ಕಾಂತರಾಜು ಸಮಿತಿ ಮಾಡಿರುವ ಜಾತಿ ಗಣತಿ ಸಮೀಕ್ಷೆಯು ಸ್ವೇಚ್ಛೆಯಿಂದ ಕೂಡಿದ್ದು ಅಸಾಂವಿಧಾನಿಕ ಎಂದು ಆದೇಶಿಸಿಬೇಕು. ಕಾಂತರಾಜು ಸಮಿತಿ ಸಂಗ್ರಹಿಸಿರುವ ದತ್ತಾಂಶ ಆಧರಿಸಿ ಕ್ರಮವಹಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೇ, ಕಾಂತರಾಜು ಸಮಿತಿಯು ನಡೆಸಿರುವ ಜಾತಿ ಸಮೀಕ್ಷೆಯನ್ನು ಸರ್ಕಾರಕ್ಕೆ ಸಲ್ಲಿಸದಂತೆ ರಾಜ್ಯ‌ ಹಿಂದುಳಿದ ವರ್ಗಗಳ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಂತರ ಪರಿಹಾರ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಕಿ' ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಸೆಲ್ಫಿಗಾಗಿ ಯುವಕನ ಹುಚ್ಚಾಟ: ಕಾಡಾನೆ ಸಮೀಪಕ್ಕೆ ಹೋಗಿ ಫೋಟೋ ತೆಗೆದುಕೊಳ್ಳಲು ಯತ್ನ; ತುಳಿದು ಕೊಂದ ಆನೆ, Video!

ಪಾಕಿಸ್ತಾನದಲ್ಲಿ 'Dhurandhar'ಬ್ಯಾನ್ ಆದ್ರೂ, ಬಿಲಾವಲ್ ಭುಟ್ಟೋ ಪಾರ್ಟಿಯಲ್ಲಿ ಹಾಡು ವೈರಲ್! Video

ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶ

ಅಧ್ಯಯನಕ್ಕೆಂದು 'ರಷ್ಯಾ'ಕ್ಕೆ ಹೋದ ಉತ್ತರಾಖಂಡ ಯುವಕ, ಬಂದದ್ದು ಶವವಾಗಿ! ಕಾರಣ ಕೇಳಿದ್ರೆ, ನಿಜಕ್ಕೂ ಬೆಚ್ಚಿ ಬೀಳ್ತಿರಾ?

SCROLL FOR NEXT