ರಾಮೇಶ್ವರ ಕೆಫೆ 
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: UAPA ಕಾಯ್ದೆಯಡಿ ಪ್ರಕರಣ ದಾಖಲು

ನಗರದ ಜನಪ್ರಿಯ ಉಪಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು UAPA ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ನಗರದ ಜನಪ್ರಿಯ ಉಪಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು UAPA ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 12.50ರಿಂದ 1ರ ನಡುವೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ ಹೋಟೆಲ್ ಸಿಬ್ಬಂದಿ, ಗ್ರಾಹಕರು ಸೇರಿ ಒಟ್ಟು 10 ಮಂದಿ ಗಾಯಗೊಂಡಿದ್ದಾರೆ. ಇನ್ನು ಸ್ಫೋಟದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣ ಸಂಬಂಧ ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (UAPA) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಘಟನೆಯಲ್ಲಿ ಹೊಟೆಲ್ ಸಿಬ್ಬಂದಿ ಸೇರಿ 10 ಗಾಯಗೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಬಗ್ಗೆ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ 1967 ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿಧಿವಿಜ್ಞಾನ ತಜ್ಞರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದೆ.

ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ವಾಚ್

ಬಾಂಬ್ ಸ್ಫೋಟ ಎನ್ನುವುದು ತಿಳಿಯುತ್ತಿದ್ದಂತೆಯೇ ಈ ಪ್ರಕರಣವನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಇಟ್ಟು ಹೋಗಿರವ ಆರೋಪಿ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ. ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ಪರಿಶೀನೆ ನಡೆದಿದೆ. ರಾಮೇಶ್ವರಂ ಕೆಫೆ ಮಾರ್ಗದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಗಳನ್ನು ಪೊಲಿಸರು ಪರಿಶೀಲನೆ ನಡೆಸಿದ್ದು, ಆತನ ಬಟ್ಟೆ ಹಾಗೂ ಚಲನವಲನ ಮೇಲೆ ಕಣ್ಣಿಟ್ಟಿದ್ದಾರೆ. ಬೆಳಗ್ಗೆ 12 ಗಂಟೆಯಿಂದ ಆರೋಪಿ ಎಲ್ಲೆಲ್ಲಿ ಓಡಾಡಿದ್ದ ಎಂದು ರಸ್ತೆಯುದ್ದಕ್ಕೂ ಮೂವ್ಮೆಂಟ್ ಆಗಿರುವುದನ್ನು ಕೂಲಂಕುಷ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರ ಪತ್ರಿಕಾ ಪ್ರಕಟಣೆ

ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಹೋಗಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್

ಇನ್ನು ಇಂದು ಘಟನಾ ಸ್ಥಳಕ್ಕೆ ಭೇಟಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, 'ಮಧ್ಯಾಹ್ನ 12ರ ಸುಮಾರಿಗೆ 30 ವರ್ಷದ ವ್ಯಕ್ತಿ ಬ್ಯಾಗ್ ತಂದಿಟ್ಟಿದ್ದ. ನಂತರ ಟೋಕನ್ ತೆಗೆದುಕೊಂಡು ರವೆ ಇಡ್ಲಿ ಸೇವಿಸಿ ಹೋಗಿದ್ದಾರೆ. ಟೈಮರ್ ಇಟ್ಟು ಮಧ್ಯಾಹ್ನ 12.55ಕ್ಕೆ ಕಡಿಮೆ ತೀವ್ರತೆ ಬಾಂಬ್ ಸ್ಫೋಟವಾಗಿದೆ. ಸ್ಫೋಟದಲ್ಲಿ ಗ್ರಾಹಕರು, ಸಿಬ್ಬಂದಿ ಸೇರಿ 10 ಜನ ಗಾಯಗೊಂಡಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಜೀವಕ್ಕೆ ಅಪಾಯವಿಲ್ಲ. ಬ್ಯಾಗ್ ತಂದಿಟ್ಟಿದ್ದ ವ್ಯಕ್ತಿಯ ಚಹರೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸ್ ಇಲಾಖೆಯ ವಿವಿಧ ತಂಡಗಳು ತನಿಖೆ ನಡೆಸುತ್ತಿವೆ. ಕೆಲವೇ ಕ್ಷಣದಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಮಾಡಲಿದ್ದಾರೆ. ಬೆಂಗಳೂರು ಸುರಕ್ಷಿತವಾಗಿದೆ, ಜನರು ಆತಂಕಪಡುವುದು ಬೇಡ ಎಂದು ಹೇಳಿದರು.

ಬ್ಯಾಗ್ ಇಟ್ಟು ಹೋದ 1 ಗಂಟೆ ಬಳಿಕ ಸ್ಫೋಟ

ಬ್ಯಾಗ್ ಇಟ್ಟು ಒಂದು ಘಂಟೆಯ ನಂತರ ಬ್ಲಾಸ್ಟ್ ಆಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ಯಾರೆಂದು ಆಲ್ ಮೋಸ್ಟ್ ಗೊತ್ತಾಗಿದೆ. ಆರೋಪಿ ಪತ್ತೆಗಾಗಿ ಸಿಸಿಬಿಯಿಂದ ಕಾರ್ಯಾಚರಣೆ ನಡೆಸಿದ್ದು, ಕೆಲವೇ ಘಂಟೆಗಳಲ್ಲಿ ಆರೋಪಿಯನ್ನ ಬಂಧನ ಮಾಡಲಾಗತ್ತದೆ ಎಂದು ಅವರು ಹೇಳಿದರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು

ಇನ್ನು ಡಿಸಿಎಂ, ಗೃಹ ಸಚಿವರು ಸ್ಪೋಟ ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿ. ಯಾರು ಆತಂಕಪಡುವ ಅಗತ್ಯವಿಲ್ಲ. ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೂವರಿಗೂ ಕಿವಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ. ಯಾರಿಗೂ ತೊಂದರೆ ಇಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT